ವಿಜಯನಗರ | ವಸತಿ ಶಾಲೆ ವಿದ್ಯಾರ್ಥಿಗಳ ಪ್ರವೇಶ ಪತ್ರ ಡೌನ್‍ಲೋಡ್‍ಗೆ ಸೂಚನೆ
Update: 2025-04-25 18:26 IST

ಸಾಂದರ್ಭಿಕ ಚಿತ್ರ
ವಿಜಯನಗರ(ಹೊಸಪೇಟೆ) : 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆನ್‌ಲೈನ್ ಮೂಲಕ ಪಡೆಯಬಹುದಾಗಿದೆ.
ಪ್ರವೇಶ ಪತ್ರವನ್ನು ವೆಬ್‌ಸೈಟ್ http://dom.karnataka.gov.in ಗೆ ಭೇಟಿ ನೀಡಿ ಸ್ಯಾಟ್ಸ್ ಸಂಖ್ಯೆಯನ್ನು ನಮೂದಿಸಿ ಡೌನ್‌ಲೊಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರ ಕುರಿತು ಯಾವುದೇ ಕುಂದುಕೊರತೆಗಳಿದ್ದಲ್ಲಿ ಜಿಲ್ಲಾ ಕಚೇರಿ, ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.