ವಿಜಯನಗರ | ಎ.5 ರಂದು ಸ್ಕೌಟ್ಸ್, ಗೈಡ್ಸ್‌ಗಳಿಗೆ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ ವಿತರಣಾ ಸಮಾರಂಭ : ಪಿ.ಮಂಜುನಾಥಪ್ಪ

ಪಿ.ಮಂಜುನಾಥಪ್ಪ
ವಿಜಯನಗರ(ಹೊಸಪೇಟೆ) : ಜಿಲ್ಲೆಯ ಕಬ್ಸ್, ಬುಲ್‌ಬುಲ್ಸ್, ಸ್ಕೌಟ್ಸ್, ಗೈಡ್ಸ್ ಹಾಗೂ ರೋರ್ಸ್ ಮತ್ತು ರೇಂಜರ್ಸ್‌ಗಳಿಗೆ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ಎ.5 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಯದರ್ಶಿ ಪಿ.ಮಂಜುನಾಥಪ್ಪ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ರವರು ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ. ಸಮಾರಂಭವನ್ನು ಜಿಪಂ ಸಿಇಒ ನೊಂಗ್ಜಾಯ್ ಮುಹಮ್ಮದ್ ಅಕ್ರಮ್ ಅಲಿ ಷಾ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರು, ಮಾಜಿ ಸಚಿವರಾದ ಪಿ.ಜಿ.ಆರ್.ಸಿಂಧ್ಯಾ ಆಗಮಿಸಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ವೆಂಕಟೇಶ್ ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಹೊಸಪೇಟೆ ಪ್ರಭಾರ ಬಿಇಒ ಶೇಖರಪ್ಪ ಹೊರಪೇಟೆ, ಎಲ್‌ಐಸಿ ಅಭಿವೃದ್ಧಿ ಅಧಿಕಾರಿ ಚೇತನ್‌ರಾಜ್ ಎಸ್.ಸಾಲಿಯನ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.