ವಿಜಯನಗರ | ಕಲುಷಿತ ನೀರು ಸೇವನೆ ಶಂಕೆ : ಮಗು ಸೇರಿ ಐವರು ಮೃತ್ಯು, 50 ಮಂದಿ ಅಸ್ವಸ್ಥ

Update: 2024-10-23 08:00 GMT

ಸಾಂದರ್ಭಿಕ ಚಿತ್ರ

ವಿಜಯನಗರ : ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಬಳಲಿ ನವಜಾತ ಶಿಶು ಸೇರಿದಂತೆ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಗ್ರಾಮದ ಸುಮಾರು 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತಪಟ್ಟವರನ್ನು ಸುರೇಶ್ (30), ಮಹಾಂತೇಶ್ (45), ಗೌರಮ್ಮ (60), ಹನುಮಂತಪ್ಪ (38) ಮತ್ತು ಎಂಟು ತಿಂಗಳ ಗಂಡು ಮಗು ಎಂದು ಹೇಳಲಾಗುತ್ತಿದೆ. ಇವರ ಸಾವಿಗೆ ಕಲುಷಿತ ನೀರು ಸೇವನೆಯೇ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ.

ಕಳೆದ 15 ದಿನಗಳಿಂದ ಗ್ರಾಮಕ್ಕೆ ಕಲುಷಿತ ನೀರು ಪೂರೈಕೆ ಆಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಜನರು ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಇದೀಗ ಕಲುಷಿತ ನೀರು ಸೇವಿಸಿ, 8 ತಿಂಗಳ ಗಂಡು ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಗ್ರಾಮದ 50ಕ್ಕೂ ಹೆಚ್ಚು ಜನರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಗರ್ಭಿಣಿ ನಿಂಗಮ್ಮ ಎಂಬುವರು ವಾಂತಿ-ಭೇದಿಯಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಂಗಮ್ಮ ಅವರಿಗೆ ವಾಂತಿ-ಭೇದಿ ತೀವ್ರವಾದ ಹಿನ್ನೆಲೆಯಲ್ಲಿ ಗರ್ಭದಲ್ಲಿನ ಮಗು ಮೃತಪಟ್ಟಿದೆ ಎನ್ನಲಾಗಿದೆ.

ವಿಜಯನಗರ ಜಿಲ್ಲಾ ಪಂಚಾಯಿತಿ ಸಿಇಒ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಳು ಗ್ರಾಮದ ಕಡೆ ದೌಡಾಗಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News