ಪ್ರಾಸಿಕ್ಯೂಷನ್‌ಗೆ ಅನುಮತಿ | ರಾಜ್ಯಪಾಲರ ನಡೆ ಖಂಡಿಸಿ ವಿಜಯನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

Update: 2024-08-19 13:28 GMT

ವಿಜಯನಗರ : ಮುಡಾ ಹಗರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಿರಾಜ್ ಶೇಖ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಗಾಂಧಿ ವೃತ್ತದಿಂದ ಕಾಂಗ್ರೆಸ್ ಮುಖಂಡರ ಜೊತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಪ್ರಮುಖ ರಸ್ತೆ, ಬಸ್ ನಿಲ್ದಾಣ, ಪುನೀತ್ ರಾಜಕುಮಾರ ವೃತ್ತ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಇ.ತುಕಾರಾಂ "ಇದು ಕಾಂಗ್ರೆಸ್ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ನಾಡಿನ ಹೋರಾಟ. ಸರ್ಕಾರ ಪಂಚ ಯೋಜನೆಗಳನ್ನು ಕೊಟ್ಟಿದ್ದು, ಬಿಜೆಪಿ, ಆರೆಸ್ಸೆಸ್ ಮತ್ತು ಕೇಂದ್ರ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಈ ದಿನ ಪ್ರತಿಭಟನೆ ನಡೆಸುತ್ತಿರುವುದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪರವಾಗಿ ಅಲ್ಲ. ರಾಜ್ಯದ ಆರೂವರೆ ಕೋಟಿ ಜನರ ಭವಿಷ್ಯದ ಕೋಟಿ ಪರವಾಗಿ ಹೇಳಿದರು.

ಪ್ರತಿಭಟನೆಯಲ್ಲಿ ಸಂಸದ ಇ.ತುಕಾರಾಂ, ಸಿರಾಜ್ ಶೇಕ್, ಸಾಹಿರಾ ಬಾನು, ಪಿ.ಟಿ ಪರಮೇಶ್ವರ ನಾಯಕ್, ಲತಾ ಮಲ್ಲಿಕಾರ್ಜುನ, ಎಚ್.ಎನ್. ಮಹಮ್ಮದ್ ಇಮಾಮ್ ನಿಯಾಝಿ, ಹಾಲಪ್ಪ, ನಿಮ್ಗಳ ರಾಮಕೃಷ್ಣ, ರಾಣಿ ಸಂಯುಕ್ತ, ಕವಿತಾ ಸಿಂಗ್, ಯೋಗ ಲಕ್ಷ್ಮಿ, ಮತ್ತು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News