ವಿಜಯನಗರ | ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ʼಮಾನವ ಸರಪಳಿʼ

Update: 2024-09-15 09:09 GMT

ವಿಜಯನಗರ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ರವಿವಾರ(ಸೆ.15)ದಂದು ರಾಜ್ಯಾದ್ಯಂತ ಬೀದರ್‌ನಿಂದ ಚಾಮರಾಜನಗರದವರೆಗೆ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ ಏಕ ಕಾಲದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಲಾಯಿತು. ಲಕ್ಷಾಂತರ ಮಂದಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಒಬ್ಬರಿಗೊಬ್ಬರು ಕೈಹಿಡಿದು ಏಕತೆ ಪ್ರದರ್ಶಿಸಿದರು.

ವಿಜಯನಗರ-ಕೊಪ್ಪಳ ಗಡಿಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟಿ.ಬಿ.ಡ್ಯಾಂ ಮೊದಲನೇ ಸೇತುವೆಯಿಂದ ಭುವನಹಳ್ಳಿವರೆಗೆ ಸುಮಾರು 40 ಕಿ.ಮೀ ಉದ್ದ ಮಾನವ ಸರಪಳಿಯನ್ನು ವಿಜಯನಗರ ಜಿಲ್ಲೆಯಲ್ಲಿ ನಿರ್ಮಿಸಲಾಯಿತು.

ಐತಿಹಾಸಿಕ ಮಾನವ ಸರಪಳಿಯಲ್ಲಿ ಜಿಲ್ಲೆಯ ಜನ ಪ್ರತಿನಿಧಿಗಳು, ಗಣ್ಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಎಲ್ಲಾ ಸಂಘ ಸಂಸ್ಥೆಗಳು ಪ್ರತಿನಿಧಿಗಳು, ಕಾರ್ಮಿಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಹೊಸಪೇಟೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಪೀಠಿಕೆ ವಾಚನಾ ಕಾರ್ಯಕ್ರಮ ನಡೆಯಿತು. ಸಸಿಗೆ ನೀರು ಹಾಕುವ ಮೂಲಕ ಶಾಸ ಎಚ್.ಆರ್.ಗವಿಯಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Delete Edit
Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News