ಝಮೀರ್ ಅಹ್ಮದ್ ಹೆಗಲಿಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ

Update: 2024-06-21 19:59 IST
ಝಮೀರ್ ಅಹ್ಮದ್ ಹೆಗಲಿಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ
  • whatsapp icon

ವಿಜಯನಗರ : ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರದ ಜತೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಝಮೀರ್ ಅಹ್ಮದ್ ಖಾನ್ ಅವರಿಗೆ ನೀಡಲಾಗುವುದು ಎಂದು ಹೇಳಿದರು.

ಈ ಕುರಿತು ಅಧಿಕೃತ ಆದೇಶ ನಾಳೆ ಹೊರಡಿಸಲಾಗುವುದು. ತಕ್ಷಣದಿಂದಲೇ ಹೊಣೆಗಾರಿಕೆ ತೆಗೆದುಕೊಳ್ಳುವಂತೆ ಝಮೀರ್ ಅಹ್ಮದ್‍ಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರಿಂದ ಬಳ್ಳಾರಿ ಜಿಲ್ಲಾ ಉಸ್ತುವಾರಿ ತೆರವಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News