ವಿಜಯಪುರ | ಭೀಕರ ರಸ್ತೆ ಅಪಘಾತ: ಐವರು ಸ್ಥಳದಲ್ಲೇ ಮೃತ್ಯು
Update: 2024-12-06 16:59 GMT
ವಿಜಯಪುರ: ಕಾರಿಗೆ ತೊಗರಿ ಕಟಾವು ಮಷಿನ್ ಢಿಕ್ಕಿಯಾಗಿ ಇಬ್ಬರು ಮಹಿಳೆಯರ ಸಹಿತ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಸಂಭವಿಸಿದೆ.
ನಿಂಗಪ್ಪಾ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ (65), ಶಶಿಕಲಾ ಜೈನಾಪೂರ (50) ಹಾಗೂ ದಿಲೀಪ್ ಪಾಟೀಲ್ (45) ಮೃತಪಟ್ಟವರು. ಮೃತರು ವಿಜಯಪುರ ತಾಲೂಕಿನ ಅಲಿಯಾಬಾದ್ ನಿವಾಸಿಗಳೆಂದು ತಿಳಿದು ಬಂದಿದೆ.
ಕಾರಿನಲ್ಲಿ ಯಾದಗಿರಿಯಿಂದ ವಾಪಸ್ ಆಗುತ್ತಿದ್ದ ವೇಳೆ ಬಿಳೆಬಾವಿ ಕ್ರಾಸ್ ಬಳಿ ತೊಗರಿ ಕಟಾವು ಮಷಿನ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಸ್ಥಳಕ್ಕೆ ತಾಳಿಕೋಟೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ತಾಳಿಕೋಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.