ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

Update: 2025-04-09 12:24 IST
ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ಬಸನಗೌಡ ಪಾಟೀಲ್ ಯತ್ನಾಳ್‌

  • whatsapp icon

ವಿಜಯಪುರ: ಪ್ರವಾದಿ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮುಹಮ್ಮದ್ ಹನ್ನಾನ್ ಶೇಖ್ ಎಂಬವರು ನೀಡಿರುವ ದೂರಿನಂತೆ ಯತ್ನಾಳ್ ವಿರುದ್ಧ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎ.7ರಂದು ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮುಹಮ್ಮದ್(ಸ.) ಅವರ ಬಗ್ಗೆ ಶಾಸಕ ಯತ್ನಾಳ್ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮುಹಮ್ಮದ್ ಹನ್ನಾನ್ ಶೇಖ್ ದೂರು ದಾಖಲಿಸಿದ್ದಾರೆ.

ಅಲ್ಲದೇ, “ಬಾಳ ಸಾಹೇಬ್ ಠಾಕ್ರೆ ಮನೆಯಲ್ಲಿ ಮುಹಮ್ಮದ್ ಪೈಗಂಬರ್ ಹುಟ್ಟಿದ್ದಾರೆ” ಎಂಬ ಆಧಾರರಹಿತ ಮತ್ತು ಧಾರ್ಮಿಕ ಅಪಮಾನಕಾರಕ ಹೇಳಿಕೆ ನೀಡಿದ್ದು, ಇದು ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ತೀವ್ರ ಘಾಸಿ ಉಂಟು ಮಾಡಿದೆ. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದಕ್ಕೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಈ ದೂರಿನ ಹಿನ್ನೆಲೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News