ಸಾರ್ವಜನಿಕರಿಗೆ ತೊಂದರೆಯಾದರೆ ಸರಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

Update: 2024-12-13 12:52 IST
ಸಾರ್ವಜನಿಕರಿಗೆ ತೊಂದರೆಯಾದರೆ ಸರಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

PC : x/@siddaramaiah

  • whatsapp icon

ವಿಜಯಪುರ : "ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ʼಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದುʼ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಅವರು ತಿಳಿಸಿದರು.

ಕಾನೂನಿನ ಮುಂದೆ ಎಲ್ಲರೂ ಸಮಾನರು :

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು.

ಪ್ರತಿಭಟನಾಕಾರರು ಕಲ್ಲು ಹೊಡೆದಿರುವ ಫೋಟೋಗಳಿವೆ :

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸರು ಕಲ್ಲು ಹೊಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದರು. ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದರು.

ಹೋರಾಟಕ್ಕೆ ಬಿಜೆಪಿ ಬೆಂಬಲ :

ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ 2% ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ 2% ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದನ್ನು ಸಿಎಂ ಉಲ್ಲೇಖಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News