"ಅಪ್ಪನಿಗೆ ಹುಟ್ಟಿರುವವರು ಬಿಡುಗಡೆ ಮಾಡಲಿ": ಸಿಡಿ ಬಿಡುಗಡೆ ಹೇಳಿಕೆ ಬಗ್ಗೆ ಯತ್ನಾಳ್‌ ಪ್ರತಿಕ್ರಿಯೆ

Update: 2024-10-15 07:14 GMT

ವಿಜಯಪುರ: ತಮ್ಮ ಸಿಡಿ ಬಿಡುಗಡೆ ಮಾಡುತ್ತೇವೆ ಅಂತ ಬಹಿರಂಗ ಎಚ್ಚರಿಕೆ ನೀಡಿದ್ದ ಜಿಲ್ಲೆಯ ಮುಸ್ಲಿಂ ಮುಖಂಡರೊಬ್ಬರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

"ಅಪ್ಪನಿಗೆ  ಹುಟ್ಟಿರುವವರಾದರೆ ಬಿಡುಗಡೆ ಮಾಡಲಿ" ಎಂದು ಸವಾಲು ಹಾಕಿದ್ದಾರೆ. 

ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್‌ ಮಾಡಿರುವ ಅವರು, " ಖಾದ್ರಿ" ಎಂಬ ಒಬ್ಬ ವಕ್ಫ್ ಆಸ್ತಿ ಲೂಟಿಕೋರ, ಹಿಂದೆ ಜಿಲ್ಲೆಯಿಂದ ಗಡೀಪಾರಾಗಿದ್ದವನೊಬ್ಬನು ನಾವು ವಕ್ಫ್ ಆಸ್ತಿಯ ಲೂಟಿಯ ಬಗ್ಗೆ ಪ್ರತಿಭಟನೆಗೆ ಮುಂದಾಗಿರುವಾಗ ನನ್ನ ಸಿ.ಡಿ ಬಿಡುಗಡೆ ಮಾಡುತ್ತೀನಿ ಎಂದು ಹೇಳಿರುವುದನ್ನು ನಾನು ಗಮನಿಸಿದ್ದೇನೆ. ಹಿಂದೆಯೂ ನಾನು ಹೇಳಿದ್ದೆ "ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಬಿಡುಗಡೆ ಮಾಡಲಿ" ಎಂದು, ಈಗ ಅದನ್ನೇ ಪುನರುಚ್ಚರಿಸುತ್ತಿದ್ದೇನೆ ಎಂದಿದ್ದಾರೆ. 

ಇಂತಹ ಅಯೋಗ್ಯರ ಹೇಳಿಕೆಗಳನ್ನು ಕೆಲ ಮಾಧ್ಯಮಗಳು ವೈಭವೀಕರಿಸುತ್ತಿರುವುದನ್ನೂ ಗಮನಿಸಿದ್ದೇನೆ. ಈಗಾಗಲೇ ಮಾನಹಾನಿ ಪ್ರಕರಣದ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದೇನೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News