ಒಂದಲ್ಲ ಒಂದು ದಿನ ನಾನೂ ಸಿಎಂ ಆಗುತ್ತೇನೆ: ಎಂ.ಬಿ.ಪಾಟೀಲ್

Update: 2024-09-08 18:13 GMT

ಬೆಂಗಳೂರು : ಪಕ್ಷದಲ್ಲಿ ನಾನು ಹಿರಿಯನಿದ್ದೇನೆ. ಒಂದಲ್ಲ ಒಂದು ದಿನ ನಾನೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಎಂ.ಬಿ.ಪಾಟೀಲ್ ಸಿಎಂ ಆಗಲ್ಲವೆಂಬ ಶಿವಾನಂದ ಪಾಟೀಲ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪ್ರಸ್ತುತ ಅಂತಹ ಸನ್ನಿವೇಶ ಬಂದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಮುಂದೆಯೂ ಇರುತ್ತಾರೆ. ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಆಗುತ್ತೇನೆ ಎಂದರು.

ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್, ಮುಡಾದಲ್ಲಿ ಎಲ್ಲ ರೀತಿಯ ಬೆಳವಣಿಗೆ ನಡೆದಿದ್ದು ಬಿಜೆಪಿ ಅವಧಿಯಲ್ಲಿ. ಇದರಲ್ಲಿ ಸಿದ್ದರಾಮಯ್ಯನವರ ಪಾಲೇನಿದೆ. ಮುಡಾದಿಂದ ಯಾರು ಭಯಗೊಂಡಿಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಇದರಲ್ಲಿ ನಮಗೆ ಜಯ ಸಿಕ್ಕೇ ಸಿಗುತ್ತದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News