ವಿಜಯಪುರ | ಕಾಲೇಜಿನಲ್ಲಿ ರ‍್ಯಾಗಿಂಗ್‌ ಪ್ರಕರಣ; ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸೂಚನೆ

Update: 2025-02-20 16:19 IST
ವಿಜಯಪುರ | ಕಾಲೇಜಿನಲ್ಲಿ ರ‍್ಯಾಗಿಂಗ್‌ ಪ್ರಕರಣ; ಹಲ್ಲೆ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸೂಚನೆ
  • whatsapp icon

ವಿಜಯಪುರ : ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ನವರಸಪುರ ಗ್ರಾಮದಲ್ಲಿರುವ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವನಿಗೆ ರ‍್ಯಾಗಿಂಗ್‌ ಮತ್ತು ದೈಹಿಕ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಕಾಲೇಜಿನ 4 ಜನ ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.

ಪ್ರಕರಣದ ವರದಿಗೆ ಸಂಬಂಧಿಸಿದಂತೆ ವಿಜಯಪುರ ಮತ್ತು ತಿಕೋಟಾ ತಹಶೀಲ್ದಾರ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯವರು ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಭೇಟಿ ಮಾಡಿ, ಪರಿಶೀಲಿಸಿ, ಯೋಗಕ್ಷೇಮ ವಿಚಾರಣೆ ನಡೆಸಿದ್ದು, ವಿದ್ಯಾರ್ಥಿಗೆ ಯಾವುದೇ ಗಾಯಗಳಾಗಿಲ್ಲ ಹಾಗೂ ದೈಹಿಕವಾಗಿ ಆರೋಗ್ಯಕರವಾಗಿದ್ದಾನೆ ಎಂದು ವರದಿ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಘಟನೆಯ ವಿವರವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಕ್ಸಿನ್ ಅವರಿಗೆ ಒದಗಿಸಿದ್ದು, ಈ ಕುರಿತು ಅವರು ಹಲ್ಲೆಗೊಳಗಾದ ವಿದ್ಯಾರ್ಥಿಗೆ ಸೂಕ್ತ ಸಹಾಯ ಹಾಗೂ ಹಲ್ಲೆ ಮಾಡಿರುವ 4 ಜನ ಹಿರಿಯ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ತಿಳಿಸಿದ್ದಾರೆ. ಅದರಂತೆ, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News