ವಿಜಯಪುರ | ಆಸ್ತಿ ಘೋಷಣೆ ಮಾಡದ ಮಹಾನಗರ ಪಾಲಿಕೆಯ ಎಲ್ಲಾ 35 ಸದಸ್ಯರು ಅನರ್ಹ

Update: 2025-03-25 10:45 IST
ವಿಜಯಪುರ | ಆಸ್ತಿ ಘೋಷಣೆ ಮಾಡದ ಮಹಾನಗರ ಪಾಲಿಕೆಯ ಎಲ್ಲಾ 35 ಸದಸ್ಯರು ಅನರ್ಹ
  • whatsapp icon

ವಿಜಯಪುರ : ವಿಜಯಪುರ ನಗರ ಪಾಲಿಕೆಯ ಎಲ್ಲಾ 35 ಸದಸ್ಯರನ್ನು ಅನರ್ಹಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆಣ್ಣವರ್ ಸೋಮವಾರ ಆದೇಶ ಹೊರಡಿಸಿದ್ದಾರೆ.

ಚುನಾವಣೆಯಲ್ಲಿ ಆಸ್ತಿ ಘೋಷಣೆ ಸಂಬಂಧಿತ ಪ್ರಕರಣದಲ್ಲಿ ಮಾಜಿ ಸದಸ್ಯರ ಅರ್ಜಿಯನ್ನು ಪರಿಗಣಿಸಿದ ಕಲಬುರಗಿ ಪೀಠ, ರಾಜ್ಯ ಸರಕಾರಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿತ್ತು. ಈ ಹಿನ್ನೆಲೆ ಅನರ್ಹಗೊಳಿಸಲಾಗಿದೆ.

ಅನರ್ಹಗೊಂಡ ಸದಸ್ಯರಲ್ಲಿ 2022ರ ಪುರಸಭೆ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿಯ 17, ಕಾಂಗ್ರೆಸ್‌ನ 10, ಜೆಡಿಎಸ್‌ನ ಒಬ್ಬರು, ಎಂಐಎಂನ ಇಬ್ಬರು ಮತ್ತು ಐದು ಸ್ವತಂತ್ರರು ಇದ್ದಾರೆ.

2024ರ ಜ.9ರಂದು ಮೇಯರ್ ಚುನಾವಣೆ ನಡೆದಿತ್ತು. ಕಾಂಗ್ರೆಸ್​ನ ಮೆಹೆಜಬೀನ್ ಹೊರ್ತಿ ಮೇಯರ್ ಮತ್ತು ದಿನೇಶ್​ ಹಳ್ಳಿ ಉಪಮೇಯರ್ ಆಗಿ ಆಯ್ಕೆಗೊಂಡಿದ್ದರು. ಆದರೆ ಯಾವ ಸದಸ್ಯರು ಕಾನೂನು ಪ್ರಕಾರ ಆಸ್ತಿ ಘೋಷಿಸಿರಲಿಲ್ಲ.

ಆಸ್ತಿ ಘೋಷಣೆ ಮಾಡದಿರುವ ಕಾರಣ ಮಾಜಿ ಸದಸ್ಯ ಪ್ರಕಾಶ್ ಮಿರ್ಜಿ ಮೈನುದ್ದೀನ್ ಬೀಳಗಿ ಅವರು ಕಲಬುರಗಿ ಹೈಕೋರ್ಟ್ ಸಂಪರ್ಕಿಸಿದ್ದರು. ನ್ಯಾಯಾಲಯವು ನಂತರ ಸರಕಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿತು. ವಿಚಾರಣೆಯ ನಂತರ, ಎಲ್ಲಾ 35 ಸದಸ್ಯರನ್ನು ಅನರ್ಹಗೊಳಿಸಲು ನಿರ್ಧರಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News