ವಿಜಯಪುರ: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

Update: 2024-02-28 10:25 GMT

ವಿಜಯಪುರ:  ನಗರದ ಕಾಂಗ್ರೆಸ್ ಕಚೇರಿಗೆ ಬುಧವಾರ   ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ತಡೆದಿರುವ ಬಗ್ಗೆ ವರದಿಯಾಗಿದೆ.

ವಿಧಾನಸೌಧದಲ್ಲಿ ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಬ್ಯಾರಿಕೇಡ್ ತಳ್ಳಿ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.  

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News