ಚಾಣಕ್ಯ ವಿವಿಗೆ ಅಕ್ರಮವಾಗಿ ನೀಡಲಾಗಿದ್ದ ಜಮೀನು ಹಿಂಪಡೆಯುವ ತೀರ್ಮಾನ ಕೈಗೊಳ್ಳದ ರಾಜ್ಯ ಸರಕಾರ

Update: 2023-08-05 03:18 GMT

ಬೆಂಗಳೂರು, ಆ.4: ಸಂಘ ಪರಿವಾರದ ಅಂಗ ಸಂಸ್ಥೆಯೂ ಸೇರಿದಂತೆ ರಾಜ್ಯದ ವಿವಿಧ ಖಾಸಗಿ ಸಂಘ ಸಂಸ್ಥೆಗಳಿಗೆ ಗೋಮಾಳವನ್ನು ನಿಯಮ ಮತ್ತು ಕಾನೂನುಬಾಹಿರವಾಗಿ 212 ಎಕರೆ ಮಂಜೂರು ಮಾಡಿ ಹೊರಡಿಸಿರುವ ಆದೇಶವನ್ನು ತಡೆಹಿಡಿದಿರುವ ಕಾಂಗ್ರೆಸ್ ಸರಕಾರವು ಚಾಣಕ್ಯ ವಿಶ್ವವಿದ್ಯಾನಿಲಯಕ್ಕೆ ನೀಡಿರುವ ಅಂದಾಜು 300 ಕೋಟಿ ರೂ. ಬೆಲೆಬಾಳುವ 116 ಎಕರೆ 16 ಗುಂಟೆ ಜಮೀನನ್ನು ಹಿಂಪಡೆಯುವುದರ ಬಗ್ಗೆ ಯಾವುದೇ ತೀರ್ಮಾನವನ್ನು ಇದುವರೆಗೂ ಕೈಗೊಂಡಿಲ್ಲ.

introduction ಹಿಂದಿನ ಬಿಜೆಪಿ ಸರಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು 2021ನೇ ಸಾಲಿನ ಚಾಣಕ್ಯ ವಿಶ್ವವಿದ್ಯಾನಿಲಯ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದ ಹೊತ್ತಿನಲ್ಲಿ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸೇರಿದಂತೆ ಪ್ರತಿಪಕ್ಷ ಕಾಂಗ್ರೆಸ್ ಶಾಸಕರೆಲ್ಲರೂ ಒಕ್ಕೊರಲಿನಿಂದ ಈ ವಿಧೇಯಕವನ್ನು ವಿರೋಧ ಪಡಿಸಿದ್ದರು. ಅಲ್ಲದೇ ಈ ವಿಧೇಯಕವನ್ನು ನೀಡಲು ಪ್ರಬಲವಾಗಿ ವಿರೋಧ ವ್ಯಕ್ತಪಡಿಸಿದ್ದರು.

ಇದೀಗ ಒಂದು ತಿಂಗಳ ಅವಧಿಯನ್ನು ಪೂರ್ಣಗೊಳಿಸಿರುವ ಕಾಂಗ್ರೆಸ್ ಸರಕಾರವು ಸಂಘ ಪರಿವಾರದ ಹಿನ್ನೆಲೆ ಹೊಂದಿರುವ ಚಾಣಕ್ಯ ವಿಶ್ವವಿದ್ಯಾನಿಲಯಕ್ಕೆ ಕನಿಷ್ಠ ದರದಲ್ಲಿ ನೀಡಿರುವ 116 ಎಕರೆ 16 ಗುಂಟೆ ಜಮೀನನ್ನು ಹಿಂಪಡೆಯುವುದರ ಬಗ್ಗೆ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

ಚಾಣಕ್ಯ ವಿಶ್ವವಿದ್ಯಾನಿಲಯಕ್ಕೆ ಜಮೀನು ನೀಡಿದ್ದರ ಸಂಬಂಧ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸದನದಲ್ಲಿ ಹಲವು ಬಾರಿ ಪ್ರಸ್ತಾಪಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Contributor - -ಜಿ.ಮಹಾಂತೇಶ್

contributor

Similar News