ಆಸ್ತಿಗಳ ವಿವರಗಳನ್ನು ಸಲ್ಲಿಸದ ಉನ್ನತ ಸರಕಾರಿ ಅಧಿಕಾರಿಗಳು
ಬೆಂಗಳೂರು: ರಾಜ್ಯ ಸರಕಾರದ ಐಎಎಸ್, ಐಪಿಎಸ್, ಐಎಫ್ಎಸ್ ಮತ್ತು ಕೆಎಎಸ್ ಅಧಿಕಾರಿಗಳು ಸೇರಿದಂತೆ ಸರಕಾರಿ ನೌಕರರು ತಮ್ಮ ಹೆಸರಿನಲ್ಲಿ ಮತ್ತು ತಮ್ಮ ಕುಟುಂಬದ ಹೆಸರಿನಲ್ಲಿ ಹೊಂದಿರುವ ಸ್ಥಿರಾಸ್ತಿ, ಚರಾಸ್ತಿ ಮತ್ತು ಪಿತ್ರಾರ್ಜಿತ ಆಸ್ತಿ, ಸ್ವಾಧೀನದಲ್ಲಿರುವ ಆಸ್ತಿಗಳ ವಿವರಗಳ ಮಾಹಿತಿಗಳನ್ನು ಲೋಕಾಯುಕ್ತಕ್ಕೆ ಒದಗಿಸುತ್ತಿಲ್ಲ.
ಈ ಸಂಬಂಧ ಕರ್ನಾಟಕ ಲೋಕಾಯುಕ್ತ ತನಿಖಾಧಿಕಾರಿಗಳು ಹಲವು ಬಾರಿ ಕೋರಿದರೂ ಸಹ ಇಲಾಖಾ ಮುಖ್ಯಸ್ಥರು, ಸಕ್ಷಮ ಪ್ರಾಧಿಕಾರಗಳು ವಿವರಗಳನ್ನು ನೀಡುತ್ತಿಲ್ಲ. ಹೀಗಾಗಿ ಈ ಬಾರಿ ಖುದ್ದು ಲೋಕಾಯುಕ್ತರೇ ರಂಗ ಪ್ರವೇಶ ಮಾಡಿದ್ದಾರೆ. ಸರಕಾರಿ ನೌಕರರು ಹೊಂದಿರುವ ಎಲ್ಲಾ ಬಗೆಯ ಆಸ್ತಿ ವಿವರಗಳ ಮಾಹಿತಿಯನ್ನು ವೆಬ್ಹೋಸ್ಟ್ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಚರ್ಚೆಗೂ ಸಿದ್ಧ ಎಂಬ ಸಂದೇಶವನ್ನೂ ರವಾನಿಸಿದ್ದಾರೆ.
ಈ ಸಂಬಂಧ ಲೋಕಾಯುಕ್ತ ಸಂಸ್ಥೆಯ ನಿಬಂಧಕ ಚಂದ್ರಶೇಖರರೆಡ್ಡಿ ಅವರು ಸರಕಾರಕ್ಕೆ ಪತ್ರ ಬರೆದಿದ್ದಾರೆ.
೨೦೨೪ರ ಡಿಸೆಂಬರ್ ೧೮ರಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರವು
‘the-file.in’ಗೆ ಲಭ್ಯವಾಗಿದೆ.
ಸರಕಾರಿ ನೌಕರರ ಆಸ್ತಿ ವಿವರಗಳನ್ನು ವೆಬ್ ಹೋಸ್ಟ್ ಮಾಡಬೇಕು ಮತ್ತು ಈ ನಿಟ್ಟಿನಲ್ಲಿ ಹೆಚ್ಚಿನ ವಿವರ, ಮಾಹಿತಿ ಬೇಕಿದ್ದಲ್ಲಿ ಲೋಕಾಯುಕ್ತರೇ ಚರ್ಚೆ ನಡೆಸಲು ಸಿದ್ಧರಿದ್ದಾರೆ ಎಂದು ರಿಜಿಸ್ಟ್ರಾರ್ ಪತ್ರದಲ್ಲಿ ಸೂಚಿಸಿರುವುದು ಅಧಿಕಾರಿ, ನೌಕರರ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯ ಸರಕಾರಿ ನೌಕರರು ಮತ್ತು ಅಖಿಲ ಭಾರತ ಸೇವೆಗಳ ನಿಯಮಗಳು ೧೯೬೮ರ ನಿಯಮ (೧೬)ಗಳ ಪ್ರಕಾರ ಐಎಎಸ್, ಐಪಿಎಸ್ ಮತ್ತು ಐಎಫ್ಎಸ್ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತೀ ಸರಕಾರಿ ನೌಕರರು ತಮ್ಮ ಮೊದಲ ನೇಮಕಾತಿ ದಿನದಿಂದಲೇ ಪ್ರತೀ ೧೨ ತಿಂಗಳ ಮಧ್ಯಂತರದಲ್ಲಿ ಅವರ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರಗಳನ್ನು ಮತ್ತು ಎಲ್ಲಾ ಸದಸ್ಯರ ವಿವರಗಳನ್ನು ಸಲ್ಲಿಸಬೇಕು. ಸಲ್ಲಿಸದಿದ್ದಲ್ಲಿ ಇದು ಅಧಿಕಾರಿಗಳ ದುರ್ನಡತೆಯಾಗಿದೆ ಎಂದು ನಿಯಮದಲ್ಲಿ ವಿವರಿಸಲಾಗಿದೆ. ಈ ಅಂಶವನ್ನು ನಿಬಂಧಕರು ಪತ್ರದಲ್ಲಿ ಉಲ್ಲೇಖಿಸಿರುವುದು ಗೊತ್ತಾಗಿದೆ.
ಸಾರ್ವಜನಿಕ ನೌಕರರ ಆಸ್ತಿಗಳ ವಿವರಗಳನ್ನು ಒದಗಿಸಬೇಕು ಎಂದು ಸೂಚಿಸಿದರೂ ಸಹ ಕೆಲವು ಇಲಾಖೆಗಳ ಇಲಾಖಾ ಮುಖ್ಯಸ್ಥರು ಅಥವಾ ಸಕ್ಷಮ ಪ್ರಾಧಿಕಾರವು ನಿರ್ಲಕ್ಷಿಸುತ್ತಿದೆ. ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ ಎಂದು ನಿಬಂಧಕರು ಅಸಮಾಧಾನ ವ್ಯಕ್ತಪಡಿಸಿರುವುದು ಪತ್ರದಿಂದ ಗೊತ್ತಾಗಿದೆ. ಕೆಲವು ಇಲಾಖೆಗಳ ಮುಖ್ಯಸ್ಥರ ವರ್ತನೆಯು ಸಂಬಂಧಿತ ನಿಯಮಗಳಿಗೆ ವಿರುದ್ಧವಾಗಿದೆ. ಅಲ್ಲದೇ ಇಂತಹ ಸರಕಾರಿ ನೌಕರರನ್ನು ರಕ್ಷಿಸುವ ಗುರಿ ಹೊಂದಿದೆ ಎಂದು ಪತ್ರದಲ್ಲಿ ಹೇಳಿರುವುದು ತಿಳಿದು ಬಂದಿದೆ.
ರಹಸ್ಯ ಆದೇಶ
ಅವರು ಅನುಮೋದನೆ ನೀಡಿದ ಆನಂತರವಷ್ಟೇ ಯಾವುದೇ ಕ್ರಮವನ್ನು ಕೈಗೊಳ್ಳಲಾಗುತ್ತಿತ್ತು. ಆದರೆ ಕಳೆದ ವರ್ಷ ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ಆದೇಶವೊಂದನ್ನು ಹೊರಡಿಸಿ, ಯಾವುದೇ ಧಾರ್ಮಿಕ ಸ್ಥಳದ ಧ್ವಂಸ ಕಾರ್ಯಾಚರಣೆ ಕಾನೂನು ಮತ್ತು ಸುವ್ಯವಸ್ಥೆಯ ವಿಷಯವಾಗಿದೆ. ಹೀಗಾಗಿ ಅದು ಲೆಫ್ಟಿನೆಂಟ್ ಗವರ್ನರ್ ಅವರ ಆಧೀನಕ್ಕೆ ಬರುತ್ತದೆ. ಈ ವಿಷಯದಲ್ಲಿ ದಿಲ್ಲಿಯ ಮುಖ್ಯಮಂತ್ರಿ ಅಥವಾ ಗೃಹ ಸಚಿವರಿಗೆ ಯಾವುದೇ ಅಧಿಕಾರವಿರುವುದಿಲ್ಲವೆಂದು ಘೋಷಿಸಿದ್ದರು’’ ಎಂದು ಆತಿಶಿ ಹೇಳಿದರು.
ಧಾರ್ಮಿಕ ಸಮಿತಿಯ ಚೇರ್ಮನ್ ದಿಲ್ಲಿ ಗೃಹ ಸಚಿವಾಲಯದ ಪ್ರಧಾನ ಕಾರ್ಯಯಾಗಿದ್ದು, ಅವರು ಧಾರ್ಮಿಕ ಸಮಿತಿಯ ಸಲಹೆ, ಸೂಚನೆಗಳನ್ನು ಅನುಮೋದನೆಗಾಗಿ ನೇರವಾಗಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಕಳುಹಿಸಿಕೊಡುತ್ತಾರೆ ಎಂದು ಆತಿಶಿ ತಿಳಿಸಿದರು.ದೇವಾಲಯಗಳ ನೆಲಸಮಕ್ಕೆ ನೀಡಲಾದ ಆದೇಶವನ್ನು ಹಿಂದೆಗೆದುಕೊಳ್ಳುವಂತೆಯೂ ಆತಿಶಿ ಅವರು ಲೆಫ್ಟಿನೆಂಟ್ ಗವರ್ನರ್ ಅವರಿಗೆ ಮನವಿ ಮಾಡಿದರು.
ಪ್ರಶ್ನೆಯೇ ಇಲ್ಲ
ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದರೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ. ಆದರೆ, ಇಂತಹದೇ ಪ್ರಕರಣದಲ್ಲಿ ಹಿಂದೆ ಕೆ.ಎಸ್.ಈಶ್ವರಪ್ಪ ಅವರ ಹೆಸರನ್ನು ಡೆತ್ನೋಟ್ನಲ್ಲಿ ಬರೆಯಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಕ್ರಮಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಸಚಿನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬಿಜೆಪಿಯವರು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ?, ಬಿಜೆಪಿಯವರು ಅಧಿಕಾರದಲ್ಲಿದ್ದಾಗ, ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದರು.
ಸರಕಾರಕ್ಕೆ ಪತ್ರ
ವಾಸ್ತವವಾಗಿ, ಈ ಮಾಹಿತಿಯನ್ನು ವೆಬ್ಹೋಸ್ಟ್ ಮಾಡಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಈ ಮಾಹಿತಿಯನ್ನು ವೆಬ್ಹೋಸ್ಟ್ ಮಾಡಬೇಕು ಎಂದು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಬಹುದು. ಇದು ಸಾಧ್ಯವಾದರೆ ಯಾವುದೇ ಶಂಕಿತ ಅಧಿಕಾರಿಗಳ ಆಸ್ತಿಯನ್ನು ಸಂಬಂಧಪಟ್ಟ ತನಿಖಾಧಿಕಾರಿಗಳೇ ಪರಿಶೀಲಿಸಬಹುದು. ಆಸ್ತಿ ವಿವರಗಳನ್ನು ಒದಗಿಸಿ ಎಂದು ಇಲಾಖೆಯ ಮುಖ್ಯಸ್ಥರನ್ನು ಪ್ರತಿಬಾರಿಯೂ ಸಂಪರ್ಕಿಸುವ ಅಗತ್ಯವಿರುವುದಿಲ್ಲ ಎಂದೂ ಪತ್ರದಲ್ಲಿ ವಿವರಿಸಿರುವುದು ಗೊತ್ತಾಗಿದೆ.
ಸಾರ್ವಜನಿಕ ನೌಕರರ ಆಸ್ತಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಹಾಗಾದರೆ ಈ ವಿಚಾರದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ನಿಗದಿಪಡಿಸಬಹುದು ಎಂದು ಪತ್ರದಲ್ಲಿ ಲೋಕಾಯುಕ್ತ ನಿಬಂಧಕರು ವಿಶ್ವಾಸ ವ್ಯಕ್ತಪಡಿಸಿರುವುದು ತಿಳಿದು ಬಂದಿದೆ.
ಅಲ್ಲದೇ ಈ ನಿಟ್ಟಿನಲ್ಲಿ ಯಾವುದೇ ಹೆಚ್ಚಿನ ಮಾಹಿತಿ ಅಥವಾ ವಿವರಗಳ ಅಗತ್ಯವಿದ್ದರೆ, ಲೋಕಾಯುಕ್ತರು ನಿಮ್ಮೊಂದಿಗೆ ಈ ವಿಷಯದಲ್ಲಿ ಚರ್ಚೆ ನಡೆಸಲು ಸಿದ್ಧರಿದ್ದಾರೆ. ಈ ಕುರಿತು ಎರಡು ವಾರದೊಳಗಾಗಿ ವರದಿ ನೀಡಬೇಕು ಎಂದು ಪತ್ರದಲ್ಲಿ ತಿಳಿಸಿರುವುದು ಗೊತ್ತಾಗಿದೆ.