ನಾನು ಸದಾಕಾಲ ಡಾ.ಅಂಬೇಡ್ಕರ್ ಹಾದಿಯಲ್ಲಿ ನಡೆಯುತ್ತೇನೆ : ಶಾಸಕ ರಾಜಾ ವೇಣುಗೋಪಾಲ ನಾಯಕ

Update: 2025-04-14 18:54 IST
ನಾನು ಸದಾಕಾಲ ಡಾ.ಅಂಬೇಡ್ಕರ್ ಹಾದಿಯಲ್ಲಿ ನಡೆಯುತ್ತೇನೆ : ಶಾಸಕ ರಾಜಾ ವೇಣುಗೋಪಾಲ ನಾಯಕ
  • whatsapp icon

ಸುರಪುರ : ನಾನು ಮತ್ತು ನಮ್ಮ ಕಾಂಗ್ರೆಸ್ ಪಕ್ಷ ಸದಾಕಾಲ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾದಿಯಲ್ಲಿ ನಡೆಯುತ್ತೇವೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ನೂರಾರು ಜಾತಿಗಳಿವೆ. ಆದರೆ, ಎಲ್ಲಾ ಜಾತಿ ಧರ್ಮಗಳ ಜನರು ಸಹಬಾಳ್ವೆ ನಡೆಸಲು ಅಂಬೇಡ್ಕರ್ ಅವರು ಬರೆದು ಕೊಟ್ಟಿರುವ ಸಂವಿಧಾನವೇ ಮುಖ್ಯವಾಗಿದೆ ಎಂದರು.

ಕಲಬುರಗಿಯ ಅನಿಲಕುಮಾರ ಟೆಂಗಳಿ ಹಾಗೂ ಉಪನ್ಯಾಸಕ ರಾಜಗೋಪಾಲ ವಿಭೂತೆ ಮಾತನಾಡಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶದ ದೀನ ದಲಿತ, ಶೋಷಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಏಳಿಗೆಗಾಗಿ ತಮ್ಮ ಜೀವನವನ್ನೆ ಮುಡುಪಾಗಿಟ್ಟು ನಮಗೆಲ್ಲ ಸಂವಿಧಾನ ಬರೆದು ಕೊಟ್ಟಿದ್ದಾರೆ ಎಂದರು.

ಕಾರ್ಯಕ್ರಮದ ಸಾನಿಧ್ಯವನ್ನು ನಾಗರತ್ನ ಬಂತೇಜಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷೆ ಹೀನಾಕೌಸರ್ ಶಕೀಲ್ ಅಹ್ಮದ ಖುರೇಷಿ, ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ (ತಾತಾ), ನಯೋಪ್ರಾ ಅಧ್ಯಕ್ಷ ಪ್ರಕಾಶ ಗುತ್ತೇದಾರ, ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್, ತಾ.ಪಂ ಇಒ ಬಸವರಾಜ ಸಜ್ಜನ್, ಡಿವೈಎಸ್ಪಿ ಜಾವಿದ್ ಇನಾಂದಾರ್, ಟಿಹೆಚ್‌ಓ ಡಾ.ಆರ್.ವಿ ನಾಯಕ,ಸಮಾಜ ಕಲ್ಯಾಣಾಧಿಕಾರಿ ಮುಹಮ್ಮದ್‌ ಸಲೀಂ, ಪಿಐ ಆನಂದ ವಾಘಮೊಡೆ ಸೇರಿದಂತೆ ಎಲ್ಲಾ ಇಲಾಖೆಯ ಅನುಷ್ಠಾನಾಧಿಕಾರಿಗಳು ವೇದಿಕೆಯಲ್ಲಿದ್ದರು.

ಮುಖಂಡರಾದ ವಿಠ್ಠಲ್ ಯಾದವ್, ರಾಜಾ ಕುಮಾರ ನಾಯಕ, ವೆಂಕಟೇಶ ಹೊಸ್ಮನಿ, ವೆಂಕಟೇಶ ಬೇಟೆಗಾರ, ಭೀಮನಗೌಡ ಹೆಮನೂರ, ಮಾಳಪ್ಪ ಕಿರದಳ್ಳಿ, ಭೀಮರಾಯ ಸಿಂದಗೇರಿ, ಶಿವಲಿಂಗ ಹಸನಾಪುರ, ಉಸ್ತಾದ ವಜಾಹತ್ ಹುಸೇನ, ರಾಹುಲ್ ಹುಲಿಮನಿ, ನಂದಕುಮಾರ ಕನ್ನೆಳ್ಳಿ, ಮಾನಪ್ಪ ಕಟ್ಟಿಮನಿ, ಮೂರ್ತಿ ಬೊಮ್ಮನಹಳ್ಳಿ, ಶಿವಕುಮಾರ ಕಟ್ಟಿಮನಿ, ಧರ್ಮಣ್ಣ ಬಡಿಗೇರ, ಯಲ್ಲಪ್ಪ ಹುಲಿಕಲ್, ದಾನಪ್ಪ ಕಡಿಮನಿ, ವೆಂಕಟೇಶ ಸುರಪುರ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ಸಾಹೆಬರಡ್ಡಿ ಇಟಗಿ, ಮಹಾದೇವಪ್ಪ ಗುತ್ತೇದಾರ ನಿರೂಪಿಸಿದರು, ಮಲ್ಲಿಕಾರ್ಜುನ ಕಟ್ಟಿಮನಿ ಸ್ವಾಗತಿಸಿದರು, ರಾಜಶೇಖರ ದೇಸಾಯಿ ವಂದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಪ್ರಮುಖ ಬೀದಿಗಳ ಮೂಲಕ ತಹಶೀಲ್ದಾರ್ ಕಚೇರಿ ವರೆಗೆ ಅಂಬೇಡ್ಕರರ ಭಾವಚಿತ್ರದ ಮೆರವಣಿಗೆ ನಡೆಯಿತು. ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಮೆರವಣಿಗೆಗೆ ಚಾಲನೆ ನೀಡಿದರು.

ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿನ ವಸತಿ ನಿಲಯದಲ್ಲಿದ್ದು ಓದಿದ 2024-25ನೇ ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ 6 ಜನ ವಿದ್ಯಾರ್ಥಿಗಳಿಗೆ ತಾಲೂಕು ಆಡಳಿತ ದಿಂದ ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News