ಎಚ್‌ಡಿಕೆ, ಬಿಜೆಪಿಯವರಿಗೆ ನಾರಿ ಶಕ್ತಿ ಬಗ್ಗೆ ಗೌರವವಿದ್ದರೆ ಸಂತ್ರಸ್ತೆಯರಿಗೆ ಧೈರ್ಯ ತುಂಬುವ ಕೆಲಸ ಮಾಡಲಿ : ಡಿ.ಕೆ. ಶಿವಕುಮಾರ್

Update: 2024-05-01 10:10 GMT

ಯಾದಗಿರಿ : “ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರು ನಾರಿ ಶಕ್ತಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ನಿಜಕ್ಕೂ ಮಹಿಳೆಯರ ಮೇಲೆ ಗೌರವವಿದ್ದರೆ ಮೊದಲು ಸಂತ್ರಸ್ತೆಯರ ಮನೆಗೆ ಹೋಗಿ ಆ ಮಹಿಳೆಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಯಾದಗಿರಿಯ ದೇವತ್ಕಲ್ ನ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು.

ಪೆನ್ ಡ್ರೈವ್ ಪ್ರಕರಣದ ಹಿಂದೆ ಮಹಾನಾಯಕರ ಕೈವಾಡವಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ದೇವರಾಜೇ ಗೌಡ ಈ ಪೆನ್ ಡ್ರೈವ್ ವಿಚಾರವಾಗಿ ಯಾರನ್ನೆಲ್ಲಾ ಭೇಟಿ ಮಾಡಿದ್ದರು ಎಂದು ನಮ್ಮ ವಕ್ತಾರರು ವಿವರಿಸಿದ್ದಾರೆ. ಈ ವಿಚಾರವಾಗಿ ದೇವರಾಜೇ ಗೌಡ, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು, ಅಲ್ಲದೇ ಬಿಜೆಪಿ ನಾಯಕರಿಗೆ ಈ ವಿಚಾರ ತಿಳಿಸಿದ್ದರು. ನಾವು ಈ ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಬೇರೆ ರೀತಿಯೇ ಮಾಡಬಹುದಾಗಿತ್ತು. ನಮಗೆ ಅದರ ಅಗತ್ಯವಿಲ್ಲ. ಈ ವಿಚಾರಗಳ ಬಗ್ಗೆ ನಾನು ಸುಮ್ಮನೆ ಕೂರುವುದಿಲ್ಲ, ಈ ವಿಚಾರವಾಗಿ ಮುಂದೆ ಮಾತನಾಡುತ್ತೇನೆ” ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News