ಎ.23ರಂದು ಯಾದಗಿರಿಗೆ ಜನಾಕ್ರೋಶ ಯಾತ್ರೆ : ನವೀನ್ ಕೋಟ್ಟಿಗೆ

Update: 2025-04-17 18:23 IST
ಎ.23ರಂದು ಯಾದಗಿರಿಗೆ ಜನಾಕ್ರೋಶ ಯಾತ್ರೆ : ನವೀನ್ ಕೋಟ್ಟಿಗೆ
  • whatsapp icon

ಯಾದಗಿರಿ : ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಎ.23 ರಂದು ನಗರಕ್ಕೆ ಆಗಮಿಸಲಿದೆ ಎಂದು ಬಿಜೆಪಿ ನಾಯಕ, ಎಂಎಲ್ ಸಿ ನವೀನ ಕೋಟ್ಟಿಗೆ ಹೇಳಿದರು.

ಇಲ್ಲಿನ‌ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಪಕ್ಷದ ಪದಾಧಿಕಾರಿಗಳ ಸಭೆ ನಂತರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಢಯಲಿರುವ ಜನಾಕ್ರೋಶ ಯಾತ್ರೆಯಲ್ಲಿ ಪ್ರತಿಪಕ್ಷದ ನಾಯಕರುಗಳಾದ ಆರ್.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಮಾಜಿ ಮಂತ್ರಿ ಶ್ರೀರಾಮುಲು ಸೇರಿದಂತೆಯೇ ಅನೇಕರು ಭಾಗವಹಿಸಲಿದ್ದು, ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪಕ್ಷದ ನಾಯಕರು, ಕಾರ್ಯಕರ್ತರು ಅಂದಿನ ಹೋರಾಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.

ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12.30 ರ ತನಕ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ವಿಭಾಗ ಪ್ರಭಾರಿ ರಾಜಕೂಮಾರ ಪಾಟೀಲ್, ಮಾಜಿ ರಾಜ್ಯ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ,ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ,ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ರಾಜ್ಯ ಅಲೆಮಾರಿ ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ,ಚಂದ್ರಶೇಖರ ಮಾಗನೂರು, ಚನ್ನುಗೌಡ ಬಿಳಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಮೇಲಪ್ಪ ಗುಳಗಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ, ಜಿಲ್ಲಾ ಮಾಧ್ಯಮ ಸಂಚಾಲಕ ವಿರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News