ಯಾದಗಿರಿ‌ ಜಿಲ್ಲೆಯಲ್ಲಿ ಯಾವುದೇ ವಕ್ಫ್ ಆಸ್ತಿ ವಿವಾದವಿಲ್ಲ: ಶರಣಬಸಪ್ಪ ಗೌಡ ದರ್ಶನಾಪುರ

Update: 2024-11-01 10:47 GMT

ಯಾದಗಿರಿ: ಜಿಲ್ಲೆಯಲ್ಲಿ ಯಾವುದೇ ವಕ್ಫ್ ಆಸ್ತಿ ವಿವಾದವಿಲ್ಲ. ಕೆಲ ಪತ್ರಿಕೆಗಳು ಅಂದಾಜು ಸುದ್ದಿ ಮಾಡಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ತಿಳಿಸಿದ್ದಾರೆ.

ನಮ್ಮ ಸರ್ಕಾರ ಬಂದ ಮೇಲೆ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ಸೇರ್ಪಡೆ ಆಗಿರುವುದಿಲ್ಲ. 2017-18 ಮತ್ತು 2020 ರಲ್ಲಿ ಪಹಣಿಯಲ್ಲಿ ವಕ್ಫ್ ಆಸ್ತಿಯೆಂದು ನಮೂದಾಗಿವೆ.ಈ ವೇಳೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು ಎಂದರು.

ನ್ಯಾಯಾಲಯದ ಆದೇಶದ ಮೇರೆಗೆ ಕೆಲವೊಂದು ವಕ್ಫ್ ಆಸ್ತಿ ಎಂದು ನಮೂದಾದರೆ ನಾವೇನು ಮಾಡಲು ಬರುವುದಿಲ್ಲ ಎಂದು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News