ಪಹಲ್ಗಾಮ್ ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನಿಯ: ಆದಪ್ಪ ಹೊಸ್ಮನಿ
Update: 2025-04-27 00:06 IST

ಆದಪ್ಪ ಹೊಸಮನಿ
ಸುರಪುರ: ಜಮ್ಮು-ಕಾಶ್ಮೀರದ ಪಹಲ್ಗಾಮ್ ದಲ್ಲಿ ಪ್ರವಾಸಕ್ಕೆ ಹೋಗಿದ್ದ 3 ಜನ ಕನ್ನಡಿಗರು ಸೇರಿದಂತೆ ದೇಶದ 26 ಜನರ ಮೇಲೆ ಉಗ್ರರು ದಾಳಿ ಮಾಡಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದೆ ಎಂದು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಆದಪ್ಪ ಹೊಸಮನಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಈ ಘಟನೆಯ ಕುರಿತು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಣಯಗಳಿಗೆ ಎಲ್ಲರೂ ಬೆಂಬಲವಾಗಿ, ಎಲ್ಲ ಪಕ್ಷಗಳು ಬೆಂಬಲಿಸಬೇಕು ಎಂದರು.
ಉಗ್ರರ ದಾಳಿಯಲ್ಲಿ ಹತ್ಯೆಗೀಡಾಗಿರುವ ಕರ್ನಾಟಕದ ಮೂರು ಜನ ಸೇರಿದಂತೆ ಎಲ್ಲ 26 ಜನರ ಕುಟುಂಬಗಳಿಗೆ ಬುದ್ಧ ಬಸವ ಅಂಬೇಡ್ಕರ್ ಅವರು ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.