ಯಾದಗಿರಿ: ವಕ್ಫ್ ಕಾಯಿದೆ ರದ್ದುಪಡಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Update: 2025-04-13 00:14 IST
ಯಾದಗಿರಿ: ವಕ್ಫ್ ಕಾಯಿದೆ ರದ್ದುಪಡಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ
  • whatsapp icon

ಯಾದಗಿರಿ: ಲೋಕಸಭೆಯಲ್ಲಿ ಅಂಗೀಕಾರವಾದ ವಕ್ಫ್ ಮಸೂದೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲೆಯ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ಸರ್ವೋಚ್ಚ ನ್ಯಾಯಾಲಯ ನ್ಯಾಯಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸೈಯದುದ್ದೀನ್ ಖಾದ್ರಿ, ವಕ್ಫ್ ಎನ್ನುವುದು ಮುಸ್ಲಿಂ ಸಮುದಾಯದ ಧಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಅಲ್ಲಾಹನ ಹೆಸರಿನಲ್ಲಿ ಮುಸ್ಲಿಂ ಸಮುದಾದವರು ತಮ್ಮ ಸ್ಥಿರ, ಚರ ಆಸ್ತಿಗಳನ್ನು ದಾನ ಮಾಡಿರುವ ಆಸ್ತಿಯಾಗಿದೆ. ಈ ಆಸ್ತಿಯನ್ನು ಮತ್ತೆ ವಾಪಸ್ ಪಡೆಯಲು, ಮಾರಾಟ ಮಾಡಲು ಸಾಧ್ಯವಿಲ್ಲ. ಈ ವಿಷಯದ ಕುರಿತು ಸುಪ್ರಿಂ ಕೋರ್ಟ ಹಲವಾರು ತೀರ್ಪುಗಳಲ್ಲಿ ಅಭಿಪ್ರಾಯ ಪಟ್ಟಿದೆ. ಒಮ್ಮೆ ವಕ್ಫ್ ಎಂದು ಘೋಷಿಸಿದ ಆಸ್ತಿಯು ವಕ್ಫ್ ಆಗಿಯೇ ಉಳಿಯುತ್ತದೆ. ಕೂಡಲೇ ಈ ಮಸೂದೆ ರದ್ದುಪಡಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಹಮ್ಮದ್ ರಫೀಕ್ ಚೌದ್ರಿ, ಸೈಯದ್ ಪಾಶ ಪಟೇಲ್, ಶೇಖ್ ಕಲೀಮ್ ತವಕಲ್ಲಿ, ಸೈಯದ ಶಫೀವುದ್ದೀನ್ ಸರಮಸ್ತ ಸೇರಿದಂತೆ ಸಂಘಟನೆಗಳ ಸಾವಿರಾರು ಮಂದಿ ಭಾಗಿಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News