ಯಾದಗಿರಿ ಪಿಎಸ್ಐ ಅನುಮಾನಾಸ್ಪದ ಸಾವು ಪ್ರಕರಣ | ಶಾಸಕರಿಂದ 30 ಲಕ್ಷ ರೂ.ಗೆ ಬೇಡಿಕೆ : ಕುಟುಂಬಸ್ಥರ ಆರೋಪ
ಯಾದಗಿರಿ: ಇಲ್ಲಿನ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಶುಕ್ರವಾರ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಿಎಸ್ಐ ಪರಶುರಾಮ ಸಾವಿನ ಸುತ್ತ ಅನುಮಾನಗಳು ಶುರುವಾಗಿದ್ದು, ಯಾದಗಿರಿ ನಗರದ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಪೋಸ್ಟಿಂಗ್ ಗಾಗಿ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಣಕ್ಕೆ ಬೇಡಿಕೆ ಇಟ್ಟಿದ್ದು, ಇದರಿಂದ ಪರಶುರಾಮ್ ಸಾಲದ ಸುಳಿಗೆ ಸಿಲುಕಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್ಗಾಗಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರೂ. ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್ ಅವರನ್ನು ಮತ್ತೆ ಯಾದಗಿರಿ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಒತ್ತಡಕ್ಕೆ ಒಳಗಾಗಿದ್ದ ಪಿಎಸ್ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು ಎನ್ನಲಾಗಿದೆ.