ಶಹಾಪುರ | ಬೈಕ್-ಕಾರು ಢಿಕ್ಕಿ: ಸ್ಥಳದಲ್ಲೇ ಇಬ್ಬರು ಮೃತ್ಯು
Update: 2025-03-18 22:27 IST

ಯಾದಗಿರಿ : ಬೈಕ್ ಮತ್ತು ಕಾರು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಆರಬೋಳ ಕಲ್ಯಾಣ ಮಂಟಪದ ಬಳಿ ನಡೆದಿದೆ.
ಮೃತ ಯುವಕರು ಸುರಪುರ ತಾಲ್ಲೂಕಿನ ಚಾಮನಾಳ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.
ಶಹಾಪುರದಿಂದ ಚಾಮನಾಳಕ್ಕೆ ಹೋಗುತ್ತಿರುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ದೇಹವನ್ನು ಶಹಾಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.