ಯಾದಗಿರಿ | ಬಿ.ಆರ್.ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ; ಶಹಾಪೂರ ಸಂಪೂರ್ಣ ಸ್ತಬ್ಧ
Update: 2024-12-31 06:48 GMT
ಯಾದಗಿರಿ : ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳಿಂದ ಶಹಾಪೂರ ಬಂದ್‌ಗೆ ಕರೆ ನೀಡಲಾಗಿದ್ದು, ಶಹಾಪೂರ ತಾಲ್ಲೂಕಿನಲ್ಲಿ ದಲಿತ ಸಂಘಟನೆ ಮತ್ತು ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಯಾದಗಿರಿ ಜಿಲ್ಲೆಯ ಶಹಾಪೂರ ನಗರದಾದ್ಯಂತ ಇಂದು(ಮಂಗಳವಾರ) ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಬಂದ್‌ಗೆ ಬಾರಿ ಬೆಂಬಲವನ್ನು ಸೂಚಿಸಿದ್ದಾರೆ.