ದೈಹಿಕ -ಮಾನಸಿಕ ನೆಮ್ಮದಿಗೆ ಕ್ರೀಡಾಕೂಟಗಳು ಸಹಕಾರಿ ; ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

ಯಾದಗಿರಿ : ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ ಕ್ರೀಡಾಕೂಟಗಳು ಹೆಚ್ಚು ಸಹಕಾರಿಯಾಗಿದ್ದು,ಸರ್ಕಾರಿ ನೌಕರರು ಉತ್ಸಾಹದಿಂದ ಭಾಗವಹಿಸಿ ರಾಷ್ಟ್ರಮಟ್ಟದಲ್ಲಿಯೂ ಕೀರ್ತಿ ತರುವಂತೆ ನಗರ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಹೇಳಿದರು.
ನಗರದಲ್ಲಿಂದು ಯಾದಗಿರಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾಕೂಟಗಳಲ್ಲಿ ಸೋಲು ಗೆಲುವಿಗೆ ಮಹತ್ವ ನೀಡದೆ, ಆಸಕ್ತಿಯಿಂದ ಭಾಗವಹಿಸಬೇಕು. ಸ್ಪರ್ದಾ ಮನೋಭಾವನೆಯಿಂದ ಭಾಗವಹಿಸಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಜಿಲ್ಲೆಯ ಕೀರ್ತಿ ಬೆಳಗಿಸುವಂತೆ ಅವರು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರು, ಸರ್ಕಾರಿ ಸೇವೆಯಲ್ಲಿ ನಿರ್ಭಯವಾಗಿ ಹಾಗೂ ಸದೃಢವಾಗಿ ಕಾರ್ಯನಿರ್ವಹಿಸಲು, ದೈಹಿಕ ಮತ್ತು ಮಾನಸಿಕ ಆರೋಗ್ಯವಂತರಿರುವುದು ಮುಖ್ಯ. ಈ ಹಿನ್ನೆಲೆಯಲ್ಲಿ ಕೆಲಸದ ಒತ್ತಡದಲ್ಲಿಯೂ ತಮ್ಮ ಕೌಶಲ್ಯ ತೆ ಹೆಚ್ಚಿಸಿಕೊಳ್ಳಬೇಕು. ಇದಕ್ಕಾಗಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಹೆಚ್ಚು ಸಹಕಾರಿಯಾಗಿವೆ ಎಂದು ಹೇಳಿದರು.
ಶಾಸಕರು ಇದೇ ಸಂದರ್ಭದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಮಟ್ಟದ ಕ್ರೀಡಾಪಟು ನಾಗೇಶ್ ಹಾಗೂ ಇತರರು ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು. ಕ್ರೀಡಾಪ್ರಮಾಣ ವಚನ ಸ್ವೀಕರಿಸಲಾಯಿತು. ಈ ಕ್ರೀಡಾಕೂಟಕ್ಕೆ 560 ಕ್ಕೂ ಹೆಚ್ಚು ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದರು. ಯುವಜನ ಸೇವಾ ಹಾಗೂ ಕ್ರೀಡಾ ಅಧಿಕಾರಿ ರಾಜು ಭಾವಿ ಹಳ್ಳಿ ಕಾರ್ಯಕ್ರಮ ನಿರೂಪಿಸಿದರು.
ನಗರಸಭೆ ಅಧ್ಯಕ್ಷ ಲಲಿತಾ ಅನಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನಾಯಕ ಮಾಲಿಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕುಮುಲಯ್ಯ ಅವರು, ಜಿಲ್ಲಾ ನೌಕರರು ಸಂಘ ಜಿಲ್ಲಾಧ್ಯಕ್ಷ ರಾಯಪ್ಪ ಗೌಡ ಹುಡೆದ, ಜಿಲ್ಲಾ ಕಾರ್ಯದರ್ಶಿ ಸಾಯಪ್ಪ ಚಂಡ್ರಕಿ, ಗುರುಮಠಕಲ್ ತಾಲೂಕಾಧ್ಯಕ್ಷ ಸಂತೋಷ ನಿರೇಟಿ, ಜಿಲ್ಲಾ ಖಜಾಂಚಿ, ರಂಗನಾಥ ನಾಯಕ,ವಡಗೇರಾ ತಾಲೂಕಾಧ್ಯಕ್ಷ ಮಲ್ಲೇಶಪ್ಪ ಹೊಸಮನಿ, ರಾಜ್ಯ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಹನಗಂಡಿ, ಸುರಪುರ ತಾಲೂಕಿನ ಅಧ್ಯಕ್ಷ ರಾಮಕೃಷ್ಣ ಹೆಗಡೆ, ಭೀಗುಡಿ ಯೋಜನಾ. ಶಾಖೆ ಅಧ್ಯಕ್ಷ ಭೀಮರೆಡ್ಡಿ ರಸ್ತಾಪುರ, ಹುಣಸಗಿ ತಾಲೂಕಾಧ್ಯಕ್ಷ ಅಮರೇಶ ಮಾಲಗತ್ತಿ, ಯಾದಗಿರಿ ತಾಲೂಕ ಆರೋಗ್ಯಾಧಿಕಾರಿ ಹನುಮಂತ ರೆಡ್ಡಿ, ತಹಸೀಲ್ದಾರ್ ಸುರೇಶ್ ಅಂಕಲಗಿ, ಹಾಗೂ ಇತರರು ಉಪಸ್ಥಿತರಿದ್ದರು. ಉಮಾ ಮಹೇಶ್ವರಿ ಪ್ರಾರ್ಥಿಸಿದರು.