ಯಾದಗಿರಿ| ನಿರುದ್ಯೋಗ ನಿವಾರಣೆಗೆ ಸರಕಾರದಿಂದ ದಿಟ್ಟ ಹೆಜ್ಜೆ: ಡಾ. ಭೀಮಣ್ಣ ಮೇಟಿ

ಯಾದಗಿರಿ: ಕಲ್ಯಾಣ ಕರ್ನಾಟಕ ಕೇಂದ್ರವಾಗಿ ಇಟ್ಟುಕೊಂಡು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಬೃಹತ್ ಮಟ್ಟದ ಉದ್ಯೋಗ ಮೇಳ ಎಪ್ರಿಲ್ 16ರಂದು ಕಲಬುರಗಿಯಲ್ಲಿ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಸಾವಿರಾರು ಜನರಿಗೆ ಉದ್ಯೋಗ ಮೇಳದಲ್ಲಿ ಸುಲಭವಾಗಿ ಉದ್ಯೋಗ ದೊರೆಯಲಿದೆ ಎಂದು ತಿಳಿಸಿದರು.
ಮೇಳದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀ ಯ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಕಲ್ಯಾಣ ಕರ್ನಾಟಕ ಭಾಗದ ಯುವಕ-ಯುವತಿಯರು ಈ ಮೇಳದಲ್ಲಿ ಭಾಗವಹಿಸುವ ಮೂಲಕ ಸಂಪೂರ್ಣವಾಗಿ ಸದುಪಯೋಗ ಮಾಡಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ರಾಜ್ಯ ಸರಕಾರ ನಡೆಯುವ ಮೂಲಕ ನಿರುದ್ಯೋಗ ಸಮಸ್ಯೆಗೆ ಅಂಕುಶ ಹಾಕಲು ಮುಂದಾಗಿದೆ. ನಿಜಕ್ಕೂ ಸಹ ಇದು ಭಾರಿ ಪ್ರಮಾಣದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ತುಂಬ ಪ್ರಯೋಜನವಾಗಲಿದೆ ಎಂದು ತಿಳಿಸಿದರು.
ಕೇಂದ್ರ ಸರಕಾರ ದೇಶದ ಜನರಿಗೆ ಉದ್ಯೋಗ ಕೊಡುವುದಾಗಿ ಬರೀ ಸುಳ್ಳು ಹೇಳುವ ಮೂಲಕ ಮೋಸ ಮಾಡುತ್ತಿದೆ. ಆದರೆ ರಾಜ್ಯದಲ್ಲಿ ಇರುವ ಕಾಂಗ್ರೆಸ್ ಸರಕಾರ ಉದ್ಯೋಗ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಇದು ನಿಜಕ್ಕೂ ಸಹ ಬದಲಾವಣೆಗೆಯ ಸಂಕೇತವಾಗಿದೆ ಎಂದು ಹೇಳಿದರು.