ಸುರಪುರ | ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಭೆ
ಯಾದಗಿರಿ : ಸುರಪುರ ನಗರದ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯು ಬೀರಲಿಂಗ ಬಾದ್ಯಾಪುರ ಮತ್ತು ತಾ.ಪಂ ಇಓ ಬಸವರಾಜ ಸಜ್ಜನ್ ಅವರು ಉಪಸ್ಥಿತಿಯಲ್ಲಿ ನಡೆಯಿತು.
ಬೀರಲಿಂಗ ಬಾದ್ಯಾಪುರ ಮಾತನಾಡಿ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಶಕ್ತಿ ಯೋಜನೆ, ಅನ್ನ ಭಾಗ್ಯ ಯೋಜನೆ, ಯುವ ನಿಧಿ ಯೋಜನೆ ಕುರಿತು ಚರ್ಚಿಸಿ ತಾಲ್ಲೂಕಿನಲ್ಲಿ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯ ಪ್ರತಿ ಒಬ್ಬ ಅರ್ಹ ಮಹಿಳಾ ಫಲಾನುಭವಿಗಳಿಗೆ ಮಾಸಿಕ 2,000 ರೂ. ಕಡ್ಡಾಯವಾಗಿ ಜಮಾ ಮಾಡಲು ಸೂಚಿಸಿದರು.
ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಬಗ್ಗೆ ವ್ಯಾಪಕವಾಗಿ ಪ್ರಚಾರ ಮತ್ತು ಮಾಹಿತಿ ನೀಡಲು ಸೂಚಿಸಿ, ಪ್ರತಿ ಬಸ್ ನಲ್ಲಿ ಮಹಿಳೆಯರು ಪ್ರಯಾಣ ಮಾಡಲು ದಾಖಲಾತಿಗಳ ಬಗ್ಗೆ ಕರ ಪತ್ರ ಗಳು ಹಾಗೂ ಬಸ್ಸ್ ನಿಲ್ದಾಣದ ಹತ್ತಿರ ಹ್ಯಾಂಡ್ ಪಾಂಪ್ಲೇಟ್ಸ್ ಕೂಡ ಹಚ್ಚಲೂ ತಿಳಿಸಿದರು.
ಯುವ ನಿಧಿ ಯೋಜನೆಗೆ ಸಂಬಂಧಿಸಿದಂತೆ 1,192 ಅರ್ಹ ನಿರುದ್ಯೋಗಿ ಫಲಾನುಭವಿ ಆಯ್ಕೆ ಮಾಡಿದ್ದು, ಇನ್ನೂ ಬಾಕಿ ಇರುವ ಅರ್ಹ ಫಲಾನುಭವಿಗಳನ್ನು ನೊಂದಾಯಿಸಿಲು ತಿಳಿಸಿದರು.
ಗೃಹಜೋತಿ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಇರುವುದಿಲ್ಲ. ಸುರಪುರ ತಾಲೂಕಿನಾದ್ಯಂತ ಜಿಂಗಲ್ಸ್ ಮೂಲಕ ವ್ಯಾಪಕವಾಗಿ ಪ್ರಚಾರ ಮಾಡಲು ಕಾರ್ಯನಿರ್ವಾಹಕ ಅಧಿಕಾರಿಯವರು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ಸಮಿತಿಯ ಸದಸ್ಯರುಗಳಾದ ವಿಜಯಕುಮಾರ್, ವಿಶ್ವ ದಿವಳಗುಡ್ಡ, ಪಾರಪ್ಪ ದೇವತ್ಕಲ್, ವೆಂಕಟೇಶ್, ಶೇಖಪ್ಪ ಬಡಿಗೇರ್, ಕಿರಣ್ ಕುಮಾರ್, ಖಾದರ್ ನಗನೂರು, ಪರಮಣ್ಣ ಕಕ್ಕೇರಾ, ಪರಶುರಾಮ ಚಿಂಚೋಳಿ, ಭೀಮಣ್ಣ ದೊಡ್ಡಮನಿ, ಘಟಕ ವ್ಯವಸ್ಥಾಪಕರಾದ ಬೀಮಸಿಂಗ ರಾಠೋಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಅನಿಲ್ ಕುಮಾರ್, ಆಹಾರ ಇಲಾಖೆ ಚಿದಾನಂದ, ಜೆಸ್ಕಾಂ ಅಧಿಕಾರಿಗಳು, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತ್ ಸಿಬ್ಬಂದಿ ವರ್ಗದವರು ಹಾಜರಿದ್ದರು.