ಸುರಪುರ | ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ
Update: 2024-12-30 15:13 GMT
ಸುರಪುರ : ಚಾಕುವಿನಿಂದ ಇರಿದು ವ್ಯಕ್ತಿ ಓರ್ವನನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಮಾಚಗುಂಡಾಳ ಗ್ರಾಮದಲ್ಲಿ ನಡೆದಿದೆ.
ಮಾಚಗುಂಡಾಳ ಗ್ರಾಮದ ಶರಣಪ್ಪ ಮಾನಪ್ಪ ಮೇಟಿ (28) ಕೊಲೆಯಾದವರು ಎಂದು ತಿಳಿದುಬಂದಿದೆ.
ಮಾಚಗುಂಡಾಳ ಗ್ರಾಮದ ಹೊರವಲಯದಲ್ಲಿನ ಪಿಡ್ಡಣ್ಣ ಮುತ್ಯಾನ ದೇವಸ್ಥಾನದ ಹಿಂಬದಿಯಲ್ಲಿ ಶರಣಪ್ಪ ಮಾನಪ್ಪ ಮೇಟಿ ಎಂಬವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್, ಡಿವೈಎಸ್ಪಿ ಜಾವಿದ್ ಇನಾಂದಾರ್ ಹಾಗೂ ಪಿಐ ಆನಂದ ವಾಗಮೊಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.