ಸುರಪುರ | ಶಾಸಕ ರಾಜಾ ವೇಣುಗೋಪಾಲ ನಾಯಕರಿಗೆ ಸಚಿವ ಸ್ಥಾನ ನೀಡಿ : ಭಂಡಾರೆಪ್ಪ ನಾಟೇಕಾರ್
ಸುರಪುರ : ಶಾಸಕ ದಿ.ರಾಜಾ ವೆಂಕಟಪ್ಪ ನಾಯಕ ಅವರ ಸುಪುತ್ರರು ಹಾಗೂ ನಮ್ಮ ಸುರಪುರ ವಿಧಾನಸಭಾ ಕ್ಷೇತ್ರದ ಉತ್ಸಾಹಿ ಶಾಸಕರಾಗಿರುವ ರಾಜಾ ವೇಣುಗೋಪಾಲ ನಾಯಕ ಅವರಿಗೆ ಸರಕಾರದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಹೆಚ್ಚಿನ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಂಡಾರೆಪ್ಪ ನಾಟೇಕಾರ್ ಮನವಿ ಮಾಡಿದ್ದಾರೆ.
ಈ ಕುರಿತು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಮಾಡಿ, ಹಿರಿಯ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು, ಆದರೆ ಅವರಿಗೆ ದೊರೆಯಲಿಲ್ಲ ಈಗ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರಿಗೆ ಸಂಪುಟ ಪುನಃರಚನೆ ಸಂದರ್ಭದಲ್ಲಿ ಆದ್ಯತೆ ನೀಡಿ ಸಚಿವ ಸ್ಥಾನ ನೀಡುವ ಮೂಲಕ ಶಾಸಕ ದಿ.ರಾಜಾ ವೆಂಕಟಪ್ಪ ನಾಯಕ ಅವರಿಗೆ ದೊರೆಯ ಬೇಕಿದ್ದ ಸ್ಥಾನವನ್ನು ಅವರ ಸುಪುತ್ರರಿಗೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಕ್ಷೇತ್ರದ ಅಭಿವೃಧ್ಧಿಗೆ ತುಂಬಾ ಉತ್ಸಾಹದಿಂದ ಕೆಲಸ ಮಾಡುತ್ತಿರುವ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಸಮರ್ಥವಾಗಿ ನಿಭಾಯಿಸುವವರಾಗಿದ್ದು, ಅವರ ಸೇವೆ ನಾಡಿಗೆ ದೊರೆಯಂತಾಗಬೇಕು, ಆ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ನಾಯಕರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವಿನಂತಿಸಿದ್ದಾರೆ.