ಸುರಪುರ | ಸಾಮೂಹಿಕ ವಿವಾಹ ಕಾರ್ಯಕ್ರಮದ ಭಿತ್ತಿ ಪತ್ರಗಳ ಬಿಡುಗಡೆ

Update: 2025-03-23 19:42 IST
ಸುರಪುರ | ಸಾಮೂಹಿಕ ವಿವಾಹ ಕಾರ್ಯಕ್ರಮದ ಭಿತ್ತಿ ಪತ್ರಗಳ ಬಿಡುಗಡೆ
  • whatsapp icon

ಸುರಪುರ : ಸತೀಶ್‌ ಜಾರಕಿಹೊಳಿ ಅಭಿಮಾನಿ ಬಳಗದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಉತ್ತಮವಾದ ಕಾರ್ಯವನ್ನು ಮಾಡುತ್ತಿದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ತಮ್ಮ ಕಚೇರಿಯಲ್ಲಿ ಕಾರ್ಯಕ್ರಮದ ಭೀತಿ ಪತ್ರಗಳನ್ನ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಂದ ಆರ್ಥಿಕ ಹೊರೆಯನ್ನು ತಪ್ಪಿಸಬಹುದು ಹಾಗೂ ಸರಕಾರದ ಸೌಲಭ್ಯಗಳನ್ನು ಕೂಡ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಇಂತಹ ಕಾರ್ಯಕ್ರಮಗಳಿಂದ ಸಂಘಟನೆ ಜನರ ಮೆಚ್ಚುಗೆಗೂ ಕೂಡ ಪಾತ್ರವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಾಂತಗೌಡ ಚನ್ನಪಟ್ಟಣ, ದೊಡ್ಡ ದೇಸಾಯಿ ದೇವರಗೋನಾಲ, ನಿಂಗರಾಜ ಬಾಚಿಮಟ್ಟಿ, ರಂಗನಗೌಡ ಪಾಟೀಲ ದೇವಿಕೇರಿ, ರಾಘವೇಂದ್ರ ಮಾಚಗುಂಡಾಳ,ನಿಂಗಣ್ಣ ಗೋನಾಲ,ಸಂಘದ ಅಧ್ಯಕ್ಷ ಸಾಹೇಬಗೌಡ ವಾಗಣಗೇರಿ, ಗೌರವಾಧ್ಯಕ್ಷ ಮಲ್ಲಿಕಾರ್ಜುನ ವಾಗಣಗೇರಿ, ಹಣಮಂತ ಭದ್ರಾವತಿ, ಶರಣಪ್ಪ ವಾಗಣಗೇರಿ, ಇಮಾಮಸಾಬ್ ವಾಗಣಗೇರಿ,ಶಿವರಾಜ ನಾಯಕ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News