ಯಾದಗಿರಿ: ಗ್ಯಾರಂಟಿ ಯೋಜನೆಗಳ ಲಾಭ ಪಡೆಯಿರಿ; ಶರಣಿಕುಮಾರ ದೋಕಾ

ಯಾದಗಿರಿ: ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳ ಸೌಲಭ್ಯವನ್ನು ಬಹುತೇಕ ಎಲ್ಲ ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲಾಗಿದೆ ಆದಾಗ್ಯೂ ಯಾರಿಗಾದರೂ ಯೋಜನೆಗಳ ಲಾಭ ಸಿಗದಿದ್ದಲ್ಲಿ ತಮ್ಮ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶರಣಿಕುಮಾರ ದೋಕಾ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯ ಸರಕಾರದ ಗೃಹಲಕ್ಷ್ಮೀ ಯೊಜನೆ ಅಡಿಯಲ್ಲಿ ಪ್ರತಿ ಕುಟುಂಬ ಯಜಮಾನನಿಗೆ ರೂ.2ಸಾವಿರ, ಗೃಹಜ್ಯೋತಿ ಅಡಿಯಲ್ಲಿ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಶಕ್ತಿ ಯೋಜನೆ ಮಹಿಳೆಯರಿಗೆ ವರದಾನವಾಗಿದ್ದು, ಕಡು ಬಡವರು ಕೂಡ ರಾಜ್ಯದ ಮೂಲೆ ಮೂಲೆಗಳಲ್ಲಿ ಇರುವ ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆಯುತ್ತಿದ್ದಾರೆ ಜತೆಗೆ ಪ್ರವಾಸಿ ತಾಣಗಳನ್ನು ವೀಕ್ಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಅನ್ನಭಾಗ್ಯ ಯೋಜನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು ಪಡಿತರ ಚೀಟಿಯಲ್ಲಿ ಹೆಸರಿರುವ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕಿಲೋ ಧಾನ್ಯಗಳ ವಿತರಣೆ ಮಾಡಲಾಗುತ್ತಿದೆ. ಇದರ ಜತೆಗೆ ಯುವನಿಧಿಯನ್ನು ಸಹ ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಯೋಜನೆಗಳಲ್ಲಿ ಯಾವುದೇ ರೀತಿಯ ತೊಡಕುಗಳು ಇದ್ದಲ್ಲಿ ನೇರವಾಗಿ ಮಿನಿ ವಿಧಾನಸೌಧ ಸಂಕೀರ್ಣದ ಸಿ.ಬ್ಲಾಕ್ ಕೊಠಡಿ ಸಂಖ್ಯೆ ಸಿ -1 ಮೊದಲನೆಯ ಮಹಡಿ ಚಿತ್ತಾಪುರ ರಸ್ತೆ ಯಾದಗಿರಿ ಸಂಪರ್ಕಿಸಲು ತಿಳಿಸಿದ್ದಾರೆ.