ಯಾದಗಿರಿ | ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದಿಂದ ಪ್ರತಿಭಟನೆ

Update: 2024-12-18 13:31 GMT

ಯಾದಗಿರಿ : ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್, ನೀರು ಗಂಟಿಗಳು, ಜವಾನ ಸ್ವಚ್ಛವಾಹಿನಿ ನೌಕರರ ಬೇಡಿಕೆ ಸೇರಿದಂತೆ ಹಲವು ಬೇಡಿಕೆಯನ್ನು ಈಡೇರಿಸಬೇಕೆಂದು ಜಿಲ್ಲಾ ಪಂಚಾಯತ್ ಕಚೇರಿ ಮುಂದೆ ಗ್ರಾಮ ಪಂಚಾಯತ್ ನೌಕರರು ಪ್ರತಿಭಟಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಖಾಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಯಾದಗಿರಿ ಜಿಲ್ಲಾ ಅಧ್ಯಕ್ಷ ಬಸರಾಜ ದೊರಿ ಗೌಡಗೇರಾ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ನೌಕರಿ ಮಾಡುತ್ತಿರುವ ಸಿಬ್ಬಂದಿಗಳ ವಿವಿಧ ಬೇಡಿಕೆಗಳಿಗಾಗಿ 2024 ಜುಲೈ 23 ಮತ್ತು 24 ಎರಡು ದಿವಸಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ನೌಕರರು ಆಗಮಿಸಿ ತೀವ್ರವಾದ ಹೋರಾಟವನ್ನು ನಡೆಸಲಾಗಿತ್ತು, ಆಗ ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಈ ಮೂರು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಆಯುಕ್ತರುಗಳು ಹೋರಾಟದ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಈ ಎಲ್ಲಾ ಬೇಡಿಕೆಗಳನ್ನು ಬಗೆಹರಿಸುವುದಾಗಿ ಹೇಳಿದರಿಂದ ನಮ್ಮ ಹೋರಾಟ ಕೈ ಬಿಡಲಾಯಿತು ಆದರೆ ಈಗ ನಮ್ಮ ಬೇಡಿಕೆ ಸರಕಾರ ಈಡೇರಿಸುತ್ತಿಲ್ಲ ಎಂದು ಆರೋಪಿಸಿದರು.

ನಮ್ಮ ಪ್ರಮುಖ ಬೇಡಿಕೆಗಳನ್ನು ತಕ್ಷಣ ಬಗೆಹರಿಸದಿದ್ದರೆ ಇದೇ ಡಿಸೆಂಬರ್ ಕೊನೆ ವಾರದಲ್ಲಿ ಜೈಲ್ಬರೋ ಚಳುವಳಿಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳಿಚಕ್ರ, ಜಿಲ್ಲಾ ಖಜಾಂಚಿ ಮಲ್ಲಣ್ಣ ಬಿರದಾರ, ಜಿಲ್ಲಾ ಗೌರವಾಧ್ಯಕ್ಷ ಜೈಲಾಲ್ ತೋಟದಮನೆ, ಮಹಾದೇವಪ್ಪ ಯಂಪಾಡ, ಮುನಿಯಪ್ಪಗೌಡ ಕುರಕುಂದ, ಅಮರಪ್ಪ ಸಗರ, ಯಲ್ಲಪ್ಪ ಸುರಪುರ, ಬಸವರಾಜ ಯಮನೂರ, ಈರಣ್ಣ ಸಾಹುಕಾರ್, ಮಲ್ಲಿಕಾರ್ಜುನ ಕಕ್ಕಸಗೇರಾ, ಸಿದ್ದರಾಮಯ್ಯ ಸ್ವಾಮಿ, ಷರಿಪ್ ಅಗ್ನಿ, ಮಲ್ಲಿಕಾರ್ಜುನ ಬಂದಳ್ಳಿ, ನಾಗಪ್ಪ ಹುಣಸಗಿ, ಮಂಜುನಾಥ ಸೇರಿದಂತೆ ಅನೇಕರು ಭಾಗವಹಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News