ಯಾದಗಿರಿ | ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳವು ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರನ ಬಂಧನ

Update: 2024-01-28 07:45 GMT

ಯಾದಗಿರಿ: ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ ಅವರನ್ನು ಶಹಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್​ ಅವರಿಗೆ ಸೇರಿದ ಶ್ರೀ ಲಕ್ಷ್ಮೀ ತಿಮ್ಮಪ್ಪ ರೈಸ್​ ಮಿಲ್​​ ​ಮೇಲೆ ಶನಿವಾರ (ಜ.27)  ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಅನ್ನಭಾಗ್ಯ ಯೋಜನೆಯ 550 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News