ಯಾದಗಿರಿ | ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆಗೆ ಮನವಿ
Update: 2025-01-06 13:47 GMT
ಯಾದಗಿರಿ : ಸುರಪುರ ತಾಲೂಕಿನಾದ್ಯಂತ ಎಲ್ಲಾ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಜ.14 ರಂದು ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಆಚರಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಯಕರ್ನಾಟಕ ರಕ್ಷಣಾ ಸೇನೆ ಸಂಘಟನೆಯ ಜಿಲ್ಲಾ ಘಟಕದ ಮುಖಂಡರು ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಹುಸೇನಸಾಬ್ ಎ ಸರಕಾವಸ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಸಭೆ ಕರೆದು ಎಲ್ಲಾ ಇಲಾಖೆಯ ಅಧಿಕಾರಿಗಳೂ ಸಭೆಗೆ ಕಡ್ಡಾಯವಾಗಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು, ಜಯಂತಿ ಆಚರಣೆ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ಶರಣು ಬೈರಿಮರಡಿ,ತಾಲೂಕ ಅಧ್ಯಕ್ಷ ಮಲ್ಲು ನಾಯಕ ಕಬಾಡಗೇರ, ತಾಲೂಕು ಕಾರ್ಯಾಧ್ಯಕ್ಷ ಶಿವರಾಜ ವಗ್ಗಾರ್, ತಾಲೂಕು ಕಾರ್ಯದರ್ಶಿ ಕೃಷ್ಣ ಹಾವಿನ್, ಮುಖಂಡ ಆನಂದಕುಮಾರ ಅಮ್ಮಾಪುರ, ಆಟೋ ಘಟಕದ ಅಧ್ಯಕ್ಷ ಹಣಮಂತ ಭಂಡಾರಿ ಸೇರಿದಂತೆ ಅನೇಕರಿದ್ದರು.