ಯಾದಗಿರಿ | ತಂತ್ರಜ್ಞಾನ ಬೆಳೆದಂತೆಲ್ಲ ಯುವಕರಲ್ಲಿ ಓದುವ ಸಂಸ್ಕೃತಿ ದೂರವಾಗಿದೆ : ಬಿ.ಹೆಚ್ ನಿರಗುಡಿ

Update: 2025-01-15 13:56 GMT

ಯಾದಗಿರಿ/ಸುರಪುರ : ನಗರೀಕರಣ ಪ್ರಭಾವದಿಂದ ಟಿ.ವಿ ಮಾಧ್ಯಮ, ಮೊಬೈಲ್ ಇತರೆ ಹೊಸ ತಂತ್ರಜ್ಞಾನ ಬೆಳೆದಂತೆಲ್ಲ ನಮ್ಮ ಯುವಕರು ಮತ್ತು ವಿದ್ಯಾರ್ಥಿಗಳು ಪುಸ್ತಕಗಳು ಓದುವ ಸಂಸ್ಕೃತಿಯಿಂದ ದೂರವಾಗುತ್ತಿದ್ದಾರೆ ಇದು ಕಳವಳದ ಸಂಗತಿಯಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಹೆಚ್.ನಿರಗುಡಿ ಹೇಳಿದರು.

ರಂಗಂಪೇಟೆಯ ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಕನ್ನಡ ರಸಪ್ರಶ್ನೆ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಸಂದರ್ಭದಲ್ಲಿ ಪಠ್ಯಪುಸ್ತಕದ ಜೊತೆಗೆ ಸಾಹಿತ್ಯ, ಸಂಸ್ಕೃತಿ, ವಚನ ಪರಂಪರೆ ಸೇರಿದಂತೆ ಅನೇಕ ಪುಸ್ತಕಗಳನ್ನು ಅಭ್ಯಾಸಮಾಡುವುದು ಅತ್ಯಂತ ಅಗತ್ಯವಾಗಿದೆ, ವಿಧ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು ಪುಸ್ತಕಪ್ರೇಮ ಬೆಳೆಸಿಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಸಿದ್ದರಾಮ ಹೊನ್ಕಲ್ ಮಾತನಾಡಿ, ವಿದ್ಯಾರ್ಥಿ ದಿಶೆಯಿಂದಲೇ ಓದುವ ಅಭಿರುಚಿ ಬೆಳೆಸಿಕೊಳ್ಳುವ ಜೊತೆಗೆ ಕಥೆ, ಕವನ, ನಾಟಕಗಳ ರಚನೆಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಹೆಚ್ಚು-ಹೆಚ್ಚು ಸಾಹಿತಿಕ ಪುಸ್ತಕಗಳನ್ನು ಓದಿ ಕೊಂಡತೆ ನಮ್ಮ ವ್ಯಕ್ತಿತ್ವ ವಿಕಸನವಾಗುತ್ತೆದೆ ಎಂದರು.

ಸುರಪುರ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಬಸವರಾಜ ಜಮದ್ರಖಾನಿ ರಸಪ್ರಶ್ನೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಸಂಸ್ಥೆಯ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣಬಸಪ್ಪ ಯಾಳವಾರ, ಕಾಲೇಜಿನ ಪ್ರಾಚಾರ್ಯ ವಿರೇಶ ಹಳಿಮನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಕಾರ್ಯಕ್ರಮವನ್ನು ಹಣಮಂತ್ರಾಯ ದೇವತ್ಕಲ್ ನಿರೂಪಿಸಿದರು, ಶ್ರೀಕಾಂತ ರತ್ತಾಳ ಪ್ರಾರ್ಥಿಸಿದರು, ಬಲಭೀಮ ಪಾಟೀಲ ಸ್ವಾಗತಿಸಿದರು, ರುದ್ರಪ್ಪ ಕೆಂಭಾವಿ ವಂದಿಸಿದರು, ಸ್ಪರ್ದೆಯಲ್ಲಿ ವಿವಿಧ ಕಾಲೇಜಿನ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News