ಯಾದಗಿರಿ | ಚರ್ಚ್ ನಿರ್ಮಾಣಕ್ಕೆ ಅನುದಾನದ ಭರವಸೆ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

Update: 2025-01-13 12:09 GMT

ಯಾದಗಿರಿ : ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಟ್ಟಿರುವ ನಮ್ಮ ಸರಕಾರ ಸರ್ವರಿಗೂ ಸಮಪಾಲು, ಸಮಬಾಳು ನೀಡುವ ನಿಟ್ಟಿನಲ್ಲಿ ಅನೇಕ ಜನಪರ ಯೋಜನೆಗಳನ್ನು ನೀಡುತ್ತಲಿದೆ. ಧಾರ್ಮಿಕ ವಿಷಯದಲ್ಲೂ ಸಹ ಸಮಾನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕಾಂಗ್ರೆಸ್ ಸರಕಾರದಲ್ಲಿ ಅವಕಾಶವಿದೆ ಎಂದು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು.

ಇಲ್ಲಿನ ಮೆಥಡಿಸ್ಟ್ ಸೆಂಟ್ರಲ್ ಚರ್ಚ್ ಆವರಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಯಾದಗಿರಿ ತಾಲೂಕಿನ ಸಮಗ್ರ ಅಭಿವೃದ್ಧಿ ಹಲವು ಯೋಜನೆಗಳನ್ನು ಕಾಮಗಾರಿ ಹಂತದಲ್ಲಿದ್ದು ಅವುಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೆಥಡಿಸ್ಟ್ ಸೆಂಟ್ರಲ್ ಚರ್ಚ್ ನೂತನ ಕಟ್ಟಡ ಕಾಮಗಾರಿಯನ್ನು ಸೂಕ್ತ ಅಗತ್ಯ ಕಾಳಜಿ ವಹಿಸಿ ನಿರ್ಮಿಸಲು ಆಧ್ಯತೆ ನೀಡಿ ಎಂದು ತಿಳಿಸಿದರು.

ಕಾಮಗಾರಿ ಕೈಗೊಳ್ಳುವಾಗ ಗುಣಮಟ್ಟದ ಕಾಯ್ದುಕೊಳ್ಳಲು ಅಧಿಕಾರಿಗಳೊಂದಿಗೆ ಚರ್ಚಿಸಿ, ಕೆಲಸ ಪೂರ್ಣಗೊಳಿಸಲು ನಿರ್ಧರಿಸಲಾಗುತ್ತದೆ ಎಂದರು.

ಶಾಸಕರ ಅನುದಾನದಲ್ಲಿ ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಕಾಮಗಾರಿ ನಿರ್ವಹಣೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ತಿಳಿಸಿದರು.

ಈ ಸಂದರ್ಭದಲ್ಲಿ ರೆವ್ ಜಾನ್ ವೆಸ್ಲಿ ಫಾಸ್ಟರ್, ಡಾ.ಸುನೀಲ ಕುಮಾರ್ ರೆಡಿಸನ್, ಬಾಲಮಿತ್ರಾ ಎಬೆಲ್, ಶಪ್ರೇಕ್ ಬಡಿಗೇರ, ಶರಣಬಸವ ಕುರಕುಂದಿ, ಪ್ರಕಾಶ ಸೇರಿದಂತೆ ಇತರರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News