ಯಾದಗಿರಿ | ತೀವ್ರ ಶೀತ ಗಾಳಿ ಹಿನ್ನೆಲೆ : ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಮನವಿ

Update: 2024-12-17 15:49 GMT

ಡಾ.ಸುಶೀಲಾ ಬಿ. 

ಯಾದಗಿರಿ : ಭಾರತೀಯ ಹವಾಮಾನ ಇಲಾಖೆಯು ಡಿ.18 ರಂದು ರೆಡ್ ಅಲರ್ಟ್ ಮತ್ತು ಡಿ.19 ರಂದು ಎಲ್ಲೋ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಸಾರ್ವಜನಿಕರನ್ನು ಕೋರಿದ್ದಾರೆ.

ಮುನ್ನೆಚ್ಚರಿಕೆ ಕ್ರಮಗಳು :

ಸಾರ್ವಜನಿಕರು ಸಾಧ್ಯವಾದಷ್ಟು ಮನೆ ಬಿಟ್ಟು ಹೊರಗಡೆ ಬಾರದಂತೆ ಎಚ್ಚರಿಕೆ ವಹಿಸುವುದು. ಒಂದು ವೇಳೆ ಅವಶ್ಯವಿದ್ದಲ್ಲಿ ಬೆಚ್ಚನೆಯ ಉಡುಪುಗಳಾದ ಸ್ವೇಟರ್, ಜಾಕೇಟ್, ಉಲನ್ ಟೋಪಿ, ಕೈ ಗೌಸ್ ಗಳನ್ನು ಧರಿಸುವುದು. ವಿಶೇಷವಾಗಿ ಚಿಕ್ಕ ಮಕ್ಕಳನ್ನು ಮನೆಯಿಂದ ಹೊರಗಡೆ ಬಿಡಬಾರದು.

ರೈತ ಬಾಂದವರು ಈ ದಿವಸಗಳಲ್ಲಿ ವಿಶೇಷವಾಗಿ ರಾತ್ರಿ ಸಮಯದಲ್ಲಿ ಹೊಲಗಳಲ್ಲಿ ತಂಗುವುದು ಮತ್ತು ಹಗಲಿನಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳದಿರಲು ತಿಳಿಸಿದೆ. ಅವಶ್ಯವಿದ್ದಲ್ಲಿ ಮಾತ್ರ ಬೆಚ್ಚನೆಯ ಉಡುಪುಗಳನ್ನು ಧರಿಸಲು ತಿಳಿಸಿದೆ. ಮುನ್ಮೆಚ್ಚರಿಕೆ ಕ್ರಮವಾಗಿ ರೈತರು ಹಿಂಗಾರು ಬೆಳೆಗಳಿಗೆ ಶೀತ ಗಾಳಿಯ ಪ್ರಭಾವವನ್ನು ಪ್ರತಿರೋಧಿಸಲು ಪ್ಲ್ಯಾನೋಫಿಕ್ಸ್ 0.5 ಎಂ.ಎಲ್. ಪ್ರತಿ ಲೀಟರ್ ನೀರಿಗೆ ಬೆರೆಸಿ ಬೆಳೆಗೆ ಸಿಂಪಡಿಸಬಹುದಾಗಿದೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News