ಯಾದಗಿರಿ | ಚುರುಕಿನಿಂದ ಕರ ವಸೂಲಾತಿ ಮಾಡಿ : ಸಿಇಓ ಲವೀಶ ಒರಡಿಯಾ

Update: 2024-12-16 14:44 GMT

ಯಾದಗಿರಿ : ಎರಡು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ ವಸೂಲಾತಿ ಕೆಲಸ ತುಂಬಾ ಚುರುಕುಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ ಒರಡಿಯಾ ತಿಳಿಸಿದರು.

ಸುರಪುರ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸುರಪುರ ಮತ್ತು ಹುಣಸಗಿ ತಾಲ್ಲೂಕಿನ ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ ವಸೂಲಾತಿಯಿಂದ ಗ್ರಾಮ ಪಂಚಾಯತ್ ಗಳು ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ, ಜಿಲ್ಲೆಯಲ್ಲಿ ಸುರಪುರ ತಾಲ್ಲೂಕಿನ ಗ್ರಾಮ ಪಂಚಾಯತ್ ಗಳು ಕರವಸೂಲಾತಿಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಮುಂಬರುವ ಎರಡು ತಿಂಗಳಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಗಳು ಶೇ. ನೂರರಷ್ಟು ಗುರಿ ತಲುಪುವಂತೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಯೋಜನಾ ನಿರ್ದೇಶಕ ಸಿ.ಬಿ ದೇವರಮನಿ, ಮುಖ್ಯ ಯೋಜನಾಧಿಕಾರಿ ಕುಮುಲಯ್ಯ, ಸಹಾಯಕ ಯೋಜನಾಧಿಕಾರಿ ಬಸವರಾಜಯ್ಯ ಸ್ವಾಮಿ, ಸುರಪುರ ತಾ.ಪಂ ಇಒ ಬಸವರಾಜ ಸಜ್ಜನ್, ಹುಣಸಗಿ ತಾ.ಪಂ ಇಒ ಬಸಣ್ಣ ನಾಯಕ, ಜಿ.ಪಂ ಎಡಿಪಿಸಿ ಬನ್ನಪ್ಪ, ಎಸ್.ಬಿ.ಎಮ್ ವೆಂಕಟೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲಾ ಗ್ರಾ.ಪಂ ಪಿಡಿಓಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News