ಯಾದಗಿರಿ | 2 ಬೈಕ್ ಗಳ ನಡುವೆ ಢಿಕ್ಕಿ : ಓರ್ವ ಮೃತ್ಯು
ಯಾದಗಿರಿ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಸವಾರನೋರ್ವ ಮೃತಪಟ್ಟಿರುವ ಘಟನೆ ಶಹಾಪುರ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಇಂದಿರಾ ನಗರದ ನಿವಾಸಿಯಾಗಿದ್ದ ನಿಜಾಮೋದ್ದೀನ್ (35) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಶುಕ್ರವಾರ ಮೃತ ನಿಜಾಮೋದ್ದೀನ್ ಅವರು ಬೈಕ್ ನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಆಳಂದ ಪಟ್ಟಣದ ನಿವಾಸಿ ಸಾಗರ ಅವರು ಬುದ್ದ ನಗರ ರಸ್ತೆಯಲ್ಲಿ ನಿಜಾಮೋದ್ದೀನ್ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ.
ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಜಾಮೋದ್ದೀನ್ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಸಾಗರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಸಿಪಿಐಎಸ್ ಎಚ್.ಪಾಟೀಲ್ ಸಿಬ್ಬಂದಿಗಳು ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ, ಪರಿಸೀಲಿಸಿದ್ದಾರೆ. ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.