ಯಾದಗಿರಿ | ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನಾಚರಣೆ

Update: 2024-11-26 13:50 GMT

ಯಾದಗಿರಿ : ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪ್ರಸ್ತಾವನೆ ಓದಲಾಯಿತು.

ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಅವರು ಮಾತನಾಡಿ, ಸಂವಿಧಾನ ಆಡಳಿತದ ಧರ್ಮ ಗ್ರಂಥವಾಗಿದೆ ಇದನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿ ಭಾರತ ಸರಕಾರಕ್ಕೆ ಸಮರ್ಪಿಸಿದ ಸ್ಮರಣೀಯ ದಿನವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ, ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ, ವೆಂಕಟರೆಡ್ಡಿ ಅಬ್ಬೆತುಮಕೂಮ, ಕೂರಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಕುರಕುಂದಿ, ಬಸವರಾಜ್ ಚಂಡರಕಿ, ಜಿಲ್ಲಾ ಬಿಜೆಪಿ ವಕ್ತಾರರಾದ ಹಣಮಂತ ಇಟಗಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ್ ಸೊನ್ನದ ಮಾರುತಿ ಕಲಾಲ್, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಗೇರಿ, ಮೌನೇಶ್ ಬೆಳಗೆರೆ, ಸ್ನೇಹ ರಾಸಳಕರ, ರಾಜಶೇಖರ ಕಾಡಮನೋರ, ಗೋಪಾಲ ದಾಸನಕೇರಿ, ಮಲ್ಲಿಕಾರ್ಜುನ ಜಲ್ಲಪ್ಪನೂರ, ಚಂದ್ರಶೇಖರ ಕಡೆಸೂರ, ಭೀಮಬಾಯಿ, ನಾಗಪ್ಪ ಗಚ್ಚಿನಮನಿ, ಶ್ರೀಕಾಂತ್ ಸುಂಗಲ್ಕರ, ನಾಗರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು..

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News