ಯಾದಗಿರಿ | ಬಿಜೆಪಿಯಿಂದ ʼಸಂವಿಧಾನ ಸನ್ಮಾನ ಅಭಿಯಾನ ಕಾರ್ಯಕ್ರಮʼ

Update: 2024-11-29 11:46 GMT

ಯಾದಗಿರಿ: ಸ್ವಾತಂತ್ರ್ಯ ಬಂದಾಗಿನಿಂದ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷವು ಹಲವಾರು ಬಾರಿ ಸಂವಿಧಾನ ತಿದ್ದುಪಡಿ ಮಾಡಿದೆ. ಅಲ್ಲದೆ, ಸಂವಿಧಾನದ ದುರುಪಯೋಗ ಪಡಿಸಿಕೊಂಡು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಕೃತ್ಯಕ್ಕೆ ಕಾಂಗ್ರೆಸ್ ಮುಂದಾಗಿತ್ತು ಎಂಬುದನ್ನು ದೇಶ, ರಾಜ್ಯದ ಜನರು ಮರೆತಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಹೇಳಿದ್ದಾರೆ.

ಸಂವಿಧಾನ ದಿನಾಚರಣೆಯ ಪ್ರಯುಕ್ತ ನಗರದ ಹೊರ ವಲಯದ ನಿವೇದಿತ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ಸಂವಿಧಾನ ಸನ್ಮಾನ ಅಭಿಯಾನ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಹಿಂದೆ ಕಾನೂನು ದಿನವನ್ನಾಗಿ ಇದನ್ನು ಆಚರಿಸಲಾಗುತ್ತಿತ್ತು. ಇದನ್ನು ಸಂವಿಧಾನ ಸಮರ್ಪಣಾ ದಿನವಾಗಿ ಅರ್ಥಪೂರ್ಣವಾಗಿ ಆಚರಿಸುವ ಅಭಿಲಾಷೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದು ಎಂದರು.

ರಾಜ್ಯ ಕಾರ್ಯದರ್ಶಿ ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ ಮಾತನಾಡಿ, ಸ್ವಾತಂತ್ರ್ಯ ನಂತರದಲ್ಲಿ ಸಂವಿಧಾನ ರಚನೆ ದೊಡ್ಡ ಸವಾಲಾಗಿತ್ತು. ಆಗ ಸಂವಿಧಾನ ಸಮಿತಿಯು ಸುದೀರ್ಘ ಎಲ್ಲ ಆಯಾಮಗಳಲ್ಲಿ ಚರ್ಚೆ ಮಾಡಿ, ಬಾಬಾಸಾಹೇಬ್ ಅಂಬೇಡ್ಕರರ ಮಾನವೀಯ ತತ್ವಗಳನ್ನು ಸೇರಿಸಿದ್ದರಿಂದ ನಮ್ಮ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ ಎನಿಸಿದೆ ಎಂದರು.

ಈ ಸಂದರ್ಭದಲ್ಲಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ರವಿಚಂದ್ರ ಕ್ರಾಂತಿಕಾರ, ಉಪನ್ಯಾಸಕ ಮೌನೇಶ್ ಅಯ್ಯಾಳ, ನಿವೇದಿತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಖಂಡಪ್ಪ ದಾಸನ, ದೇವಿಂದ್ರನಾಥ ನಾದ, ಮೇಲಪ್ಪ ಗುಳಗಿ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಚನ್ನಾರಡ್ಡಿ ಬಿಳಾರ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಬಸವರಾಜ ವಿಭೂತಹಳ್ಳಿ, ಸದಾಶಿವಪ್ಪಗೌಡ ರೊಟ್ನಡಗಿ, ಮಹಾದೇವಪ್ಪ ಯಲಸತ್ತಿ, ಭೀಮಾಶಂಕರ ಬಿಲ್ಲವ ಮತ್ತಿತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News