ಯಾದಗಿರಿ | ಮಾಜಿ ಪ್ರಧಾನಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ
ಯಾದಗಿರಿ : ಮಾಜಿ ಪ್ರಧಾನಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಅವರು, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಂತಹ ಉಪಕ್ರಮಗಳ ಮೂಲಕ ಸ್ಥಳೀಯ ಸಂಪರ್ಕವನ್ನು ಹೆಚ್ಚಿಸಲು ವಾಜಪೇಯಿ ಸರ್ಕಾರದ ಪ್ರಯತ್ನಗಳು ಅಷ್ಟೇ ಗಮನಾರ್ಹವಾಗಿವೆ ಎಂದರು.
ಈ ಸಂದರ್ಭದಲ್ಲಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಅವರು ಅದ್ಭುತ ವಾಗ್ಮಿ ಮತ್ತು ನಾಯಕರಾಗಿ ಹೆಸರುವಾಸಿಯಾಗಿದ್ದು, ನಾಯಕರು ಮತ್ತು ವಿರೋಧ ಪಕ್ಷಗಳಿಂದ ಅಪಾರ ಗೌರವ ಮತ್ತು ಮೆಚ್ಚುಗೆಯನ್ನು ಗಳಿಸಿದ್ದಾರೆ. ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆಗಳಿಗೆ ಹೆಸರುವಾಸಿಯಾಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ, ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ, ವೆಂಕಟರೆಡ್ಡಿ ಅಬ್ಬೆತುಮಕೂರು, ಜಿಲ್ಲಾ ವಕ್ತಾರ ಹಣಮಂತ ಇಟಗಿ,ಜಿಲ್ಲಾ ಉಪಾಧ್ಯಕ್ಷ ಮಾರುತಿ ಕಲಾಲ್, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೋನಿಗೇರಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ ಮತ್ತು ಮಾಶೇಪ್ಪ ನಾಯಕ, ಗೋಪಾಲ ದಾಸನಕೇರಿ,ಶರಣುಗೌಡ ಅಲಿಪುರ,ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ದೊಡ್ಡಮನಿ ಮತ್ತು ಮಲ್ಲಿಕಾರ್ಜುನ ಕಟ್ಟಿಮನಿ, ಶಕುಂತಲಾ ಜಿ, ಭೀಮಬಾಯಿ ಶೆಂಡೀಗಿ, ಮಹಾದೇವಪ್ಪ ಗಣಪುರ,ಯಾಲ್ಲಪ್ಪ ಮೆಳಿಕೇರಿ, ಆಂಜನೇಯ ಬಬಲಾದಿ,ಶಿವಣ್ಣ ಬಡಿಗೇರ ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.