ಯಾದಗಿರಿ | ಮಕ್ಕಳು ಕಾನೂನಿನ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕ : ನ್ಯಾ.ಮರಿಯಪ್ಪ
ಯಾದಗಿರಿ : ಸಾಮಾನ್ಯವಾಗಿ ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ಸಮಾಜಿಮುಖಿ ಕಾರ್ಯಗಳನ್ನು ಕೈಗೊಳ್ಳಲು ಕಾನೂನಿನ ಸಾಮಾನ್ಯ ಜ್ಞಾನವನ್ನು ಹೊಂದುವುದು ಅವಶ್ಯಕವಾಗಿದೆ. ಶಿಕ್ಷಣ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗೆ ಇರುವ ಏಕೈಕ ಅಸ್ತ್ರವಾಗಿದೆ ಎಂಬ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಮರಿಯಪ್ಪ ಅವರು ತಿಳಿಸಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ಸರಕಾರಿ ಕನ್ಯಾ ಪ್ರೌಢ ಶಾಲೆ, ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ 2024ರ ನವೆಂಬರ್ 14ರ ಗುರುವಾರ ರಂದು ಮಕ್ಕಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿವರ್ಷವು ಸಹ ನ.14 ರಂದು ಮಕ್ಕಳ ದಿನಾಚರಣೆ ದೇಶದಾದ್ಯಂತ ಆಚರಿಸಲಾಗುತ್ತಿದೆ. ಈ ದಿನದ ಮಹತ್ವವೇನು ಎಂಬುದನ್ನು ತಿಳಿಯುವುದು. ಪ್ರತಿ ವಿದ್ಯಾರ್ಥಿಗಳ ಕರ್ತವ್ಯ. ಶಿಕ್ಷಣ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗೆ ಇರುವ ಏಕೈಕ ಅಸ್ತ್ರವಾಗಿದೆ ಎಂಬ ಬಗ್ಗೆ ಇಂದಿನ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಬೇಕಾಗಿದೆ. ವಿದ್ಯಾರ್ಥಿಗಳಿಗೆ ಸಾಧಕರ ಜೀವನದ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಎಲ್ಲರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಕೊಳ್ಳಬೇಕು ಎಂದರು
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಬಸಮ್ಮ ಶೀನೂರು, ಪ್ಯಾನೆಲ್ ವಕೀಲರು ಎಮ್.ಡಿ.ಕಲಿಮೊದ್ದಿನ್ನ್, ಶಾಲೆಯ ಸಹ ಶಿಕ್ಷಕರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಿಬ್ಬಂದಿಗಳು ಉಪಸ್ಥಿತರಿದ್ದರು.