ಯಾದಗಿರಿ | ಜ.6 ರಂದು ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ : ಮಾರೆಪ್ಪ ನಾಯಕ ಮಗ್ದಂಪುರ

Update: 2025-01-02 12:34 GMT

ಯಾದಗಿರಿ : ಜ.6ರಂದು ಭಗವಾನ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವು ಸೈದಪೂರ ವಲಯದ ಕರಿಬೆಟ್ಟ ಕ್ರಾಸ್ ಹತ್ತಿರ ಆಯೋಜಿಸಿದ್ದೇವೆ ಎಂದು ಉತ್ತರ ಕರ್ನಾಟಕ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾದ ಮಾರೆಪ್ಪ ನಾಯಕ ಮಗ್ದಂಪುರ ಹೇಳಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಗವಾನ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪರಮ ಪೂಜ್ಯ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಪೂಜ್ಯ ವಾಲ್ಮೀಕಿ ವರದಾನಂದೇಶ್ವರ ಸ್ವಾಮೀಜಿ ದಿವ್ಯಸಾನಿದ್ಯ ವಹಿಸಲಿದ್ದಾರೆ ಎಂದರು.

ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಪುತ್ಥಳಿ ಅನಾವರಣ ಮಾಡಲಿದ್ದಾರೆ. ಸಣ್ಣ ಕೈಗಾರಿಕೆ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಪುರ ಅವರು ಕಾರ್ಯಕ್ರಮದ ಜ್ಯೋತಿ ಬೆಳಗಿಸಲಿದ್ದಾರೆ. ಗುರಮಿಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಳ್ಳಾರಿ ಮಾಜಿ ಲೋಕಸಭಾ ಸದಸ್ಯರಾದ ವಿ.ವಿ.ಎಸ್.ಉಗ್ರಪ್ಪ ಅವರು ಕಾರ್ಯಕ್ರಮದ ಧ್ವಜಾರೋಹಣ ನೇರವೆರಿಸಲಿದ್ದಾರೆ. ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ ಅವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ ಎಂದು ಹೇಳಿದರು.

ಕಲಬುರಗಿ ಲೋಕಸಭಾ ಕ್ಷೇತ್ರದ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ, ಅಗ್ನಿ ಶಾಮಕ ಮತ್ತು ತುರ್ತುಸೇವೆಗಳ ಡಿಐಜಿ ಅಧಿಕಾರಿಗಳಾದ ರವಿ ಡಿ ಚೆನ್ನಣ, ಸುರಪುರ ಮತಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ, ದೇವದುರ್ಗ ಮತಕ್ಷೇತ್ರದ ಶಾಸಕಿಯಾದ ಶ್ರೀಮತಿ ಕರೆಮ್ಮ ನಾಯಕ, ಮಾಜಿ ಸಚಿವರಾದ ರಾಜುಗೌಡ ( ನರಸಿಂಹ ನಾಯಕ), ರಾಯಚೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಬಿ ವಿ ನಾಯಕ, ಮಾಜಿ ಸಚಿವರಾದ ಶಿವನಗೌಡ ನಾಯಕ, ಭಗವಾನ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಭೂದಾನಿಗಳಾದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೇಣಿಕುಮಾರ ಅವರುಗಳು ವಿಶೇಷ ಅಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಮಸ್ತ ವಾಲ್ಮೀಕಿ ಸಮಾಜದ ಹಿರಿಯರು, ಯುವಕರು, ಮಹಿಳೆಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೋಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿ ಗೋಷ್ಠಿಯಲ್ಲಿ ನಿವೃತ್ತ ತಹಶೀಲ್ದಾರ್ ಸಿದ್ದಲಿಂಗಪ್ಪ ನಾಯಕ, ವಾಲ್ಮೀಕಿ ಸಮಾಜದ ಮುಖಂಡರಾದ ದೊಡ್ಡಯ್ಯ ಹಳಿಗೇರಾ, ಶರಣಪ್ಪ ಜಾಕನಳ್ಳಿ, ರವಿಂದ್ರ ನಾಯಕ ಕೂಡ್ಲೂರು, ಲಕ್ಷ್ಮಣ್ಣ ನಾಯಕ ಕೂಡ್ಲೂರು, ಬಸವರಾಜ ನಿಲಹಳ್ಳಿ, ಅಂಬರೀಶ ಕೂಡ್ಲೂರು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News