ಯಾದಗಿರಿ | ಮನೆಯಂಗಳದಲ್ಲಿ ಮನದುಂಬಿ ನಮನ ಕಾರ್ಯಕ್ರಮ

Update: 2025-01-07 11:33 GMT

ಯಾದಗಿರಿ: ಪತ್ರಕರ್ತರು ವೃತ್ತಿಯಲ್ಲಿ ನೈತಿಕತೆ ಮೈಗೂಡಿಸಿಕೊಂಡು ಸಮಾಜದಲ್ಲಿ ಬೆಳಕು ಚೆಲ್ಲುವ ಕೆಲಸ ಪ್ರಾಮಾಣಿಕವಾಗಿ ಮಾಡಬೇಕು ಎಂದು ಹಿರಿಯ ಪತ್ರಕರ್ತ ಸಿ.ಎಂ.ಪಟ್ಟೇದಾರ ಹೇಳಿದರು

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ನಡೆದ ʼಮನೆಯಂಗಳದಲ್ಲಿ ಮನದುಂಬಿ ನಮನ ಸಮಾರಂಭʼದಲ್ಲಿ ಸಂಘದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜನರು ಮಾಧ್ಯಮದ ಮೇಲೆ ನಿರೀಕ್ಷೆಗೂ ಮೀರಿ ಅಪಾರವಾದ ವಿಶ್ವಾಸ ಇಟ್ಟುಕೊಂಡಿದ್ದಾರೆ. ಹೀಗಾಗಿ ಪತ್ರಕರ್ತರು ಅಳಕಿಲ್ಲದೇ ವರದಿಗಾರಿಕೆ ಮಾಡುವ ಮೂಲಕ ಸಮಾಜವನ್ನು ಎಚ್ಚರಿಸುವಂತಹ ಕೆಲಸ ಮಾಡಬೇಕು ಎಂದರು.

ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಮಾತನಾಡಿ, ನಾಡಿನ ಪತ್ರಿಕೋದ್ಯಮ ಕ್ಷೇತ್ರಕ್ಕೆ ಹಿರಿಯ ಪತ್ರಕರ್ತರು ಅಮೋಘವಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆ ಮರೆಯುವಂತಿಲ್ಲ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಮಹೇಶ್ ಕಲಾಲ್, ಉಪಾಧ್ಯಕ್ಷ ರಾಜು ನಲ್ಲಿಕರ್, ಕಾರ್ಯದರ್ಶಿ ಸಿದ್ದಪ್ಪ ಲಿಂಗೇರಿ, ನಾಗರಾಜ ಕೋಟೆ, ಮಂಜು ಸಗರ್, ಅರುಣ್ ಮಾಸನ್ ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News