ಯಾದಗಿರಿ | ಬಾಂಗ್ಲಾದೇಶದ ಹಿಂದೂಗಳ ಮೇಲಿನ ದಾಳಿ ಖಂಡಿಸಿ ಪಂಜಿನ ಮೆರವಣಿಗೆ

Update: 2024-12-06 14:41 GMT

ಯಾದಗಿರಿ : ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಬಾಂಗ್ಲಾದೇಶದಲ್ಲಿ ನಡೆಯಿತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದ ಆಂಜನೇಯ ದೇವಸ್ಥಾನದಿಂದ ಸುಭಾಷ್ ಚಂದ್ರ ಬೋಸ್ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು.

ಮೆರವಣಿಗೆಯಲ್ಲಿ ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ್ ಮಾತನಾಡಿ, ಬಾಂಗ್ಲಾದೇಶದ ಹಿಂದೂಗಳ ಪರವಾಗಿ ಹೋರಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ  ಚಿನ್ಮಯ್ ಕೃಷ್ಣದಾಸ್ ಪ್ರಭು ಅವರ ಬಂಧನ ಖಂಡಿನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ವೆಂಕಟರೆಡ್ಡಿ ಅಬ್ಬೆತುಮಕೂರು, ಯುಡ ಮಾಜಿ ಅಧ್ಯಕ್ಷ ಬಸವರಾಜ ಚಂಡ್ರಕಿ, ನಗರಸಭೆ ಮಾಜಿ ಅಧ್ಯಕ್ಷ ವಿಲಾಸ ಪಾಟೀಲ, ನಗರಸಭೆ ಮಾಜಿ ಉಪಾಧ್ಯಕ್ಷೆ ಪ್ರಭಾವತಿ ಕಲಾಲ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ ಮತ್ತು ವಿಜಯಲಕ್ಷ್ಮಿ ನಾಯಕ, ಮಂಜುನಾಥ ದಾಸನಕೆರಿ, ವೀಣಾ ಮೋದಿ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಿಗೇರ, ಮೋನೇಶ ಬೆಳಿಗೇರ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ ದೊಡ್ಡಮನಿ, ಅಪ್ಪಣ್ಣ ಜೈನ, ಶರಣುಗೌಡ ಅಲಿಪುರ, ಮಲ್ಲು ಕೊಲಿವಾಡ, ನಾಗಪ್ಪ ಗಚ್ಚಿನಮನಿ, ಭೀಮಬಾಯಿ ಶೆಂಡೀಗಿ, ಚಂದ್ರಕಲಾ ಕಿಲ್ಲಕೇರಿ,ಸ್ನೇಹ ರಾಸಳಕರ, ಕಲ್ಪನ ಜೈನ್, ಮರಲಿಂಗ ಕಿಲ್ಲಕೇರಿ, ವಿಕಾಸ ಚೌವ್ಹಾಣ್, ಮಲ್ಲು ಸ್ವಾಮಿ ಗುರುಸುಣಗಿ, ಚಂದ್ರಶೇಖರ ಕಡೆಸೂರ, ಬಸ್ಸು ಬಳಿಚಕ್ರ ಸೇರಿದಂತೆ ಅನೇಕ ಯುವ ಮೋರ್ಚಾ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News