ಯಾದಗಿರಿ | ಜಲಜೀವನ್ ಮಿಷನ್ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಸದನದಲ್ಲಿ ಶಾಸಕ ರಾಜಾ ವೇಣುಗೋಪಾಲ್‌ ಆಗ್ರಹ

Update: 2024-12-17 15:27 GMT

ರಾಜಾ ವೇಣುಗೋಪಾಲ್‌ ನಾಯಕ್‌

ಯಾದಗಿರಿ : ಸುರಪುರ ಮತಕ್ಷೇತ್ರದಲ್ಲಿ 250ಕ್ಕೂ ಹೆಚ್ಚು ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು, ಅನೇಕ ಕಾಮಗಾರಿಗಳು ಕಳಪೆಯಾಗಿವೆ, ಸಚಿವರು ಇದರ ತನಿಖೆ ಮಾಡಿಸುವಂತೆ ಶಾಸಕ ರಾಜಾ ವೇಣುಗೋಪಾಲ್‌ ನಾಯಕ್‌ ತಿಳಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಾತನಾಡಿದ ಅವರು, ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದ ಗುಣಮಟ್ಟ ಇನ್ನೂ ಸುಧಾರಣೆಯಾಗಲು ಶಿಕ್ಷಕರನ್ನು ನೇಮಕಗೊಳಿಸಬೇಕು, ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಸಂಬಳವನ್ನು ಹೆಚ್ಚಿಸುವಂತೆ ಮನವಿ ಮಾಡಿಕೊಂಡರು. ಅಲ್ಲದೆ ನಮ್ಮ ಭಾಗದಲ್ಲಿ ಜನರಿಗೆ ಉದ್ಯೋಗದ ತೊಂದರೆ ಇದ್ದು, ಇಲ್ಲಿಯ ಜನರ ಜೀವನಕ್ಕೆ ಅನುಕೂಲವಾಗಲು ಕೈಗಾರಿಕೆಗಳನ್ನು ಆರಂಭಿಸುವಂತೆ ಸಚಿವರು ಕ್ರಮ ಕೈಗೊಳ್ಳಬೇಕು ಎಂದರು.

ನಮ್ಮ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದರಿಂದಾಗಿ ನಮ್ಮ ಭಾಗದಲ್ಲಿ ಜನರಿಗೆ ತುಂಬಾ ಅನುಕೂಲವಾಗಿದೆ. ಅದಕ್ಕಾಗಿ ಮುಖ್ಯಮಂತ್ರಿಗಳಿಗೆ ಮತ್ತು ಉಪ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News