ಯಾದಗಿರಿ | ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

Update: 2024-11-02 17:41 GMT
ಸಾಂದರ್ಭಿಕ ಚಿತ್ರ

ಯಾದಗಿರಿ : ವ್ಯಕ್ತಿಯೊಬ್ಬನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಎಎಂಡಿ ಕ್ಯಾಂಪಿನ ಬಳಿ ಶನಿವಾರ ಸಂಜೆ ನಡೆದಿದೆ

ಜಾಪಾನಾಯಕ ತಾಂಡಾದ ತಿಪ್ಪಣ್ಣ (35) ಕೊಲೆಯಾದ ವ್ಯಕ್ತಿ. ಶಹಾಪುರನಿಂದ ಯಾದಗಿರಿಗೆ ಬೈಕ್ ಮೇಲೆ ತಿಪ್ಪಣ್ಣ  ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ತಡೆದು, ಮುಖ ಹಾಗೂ ಕುತ್ತಿಗೆ ಭಾಗಕ್ಕೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಳೆಯ ವೈಷಮ್ಯ ಹಿನ್ನೆಲೆ ಹತ್ಯೆಗೈಯಲಾಗಿದೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ  ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News