ಯಾದಗಿರಿ | ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ

Update: 2024-11-12 14:33 GMT

ಯಾದಗಿರಿ : ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಕಾನೂನು ಸೇವಾ ಪ್ರಾಧಿಕಾರದ ಮುಖ್ಯವಾದ ಕೆಲಸವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಫಕೀರವ್ವ ಕೆಳಗೇರಿ ತಿಳಿಸಿದ್ದಾರೆ.

ಸುರಪುರ ನಗರದ ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಗತ್ಯ ಇರುವವರಿಗೆ ಕಾನೂನಿನ ನೆರವು ನೀಡುವುದು ಹಾಗೂ ಇಂದು ನ್ಯಾಯಾಲಯಗಳಲ್ಲಿ ಅನೇಕ ಪ್ರಕರಣಗಳು ಬಾಕಿ ಉಳಿದಿವೆ. ಅವುಗಳ ಭಾರ ಕಡಿಮೆಗೊಳಿಸುವುದು ಪ್ರಾಧಿಕಾರದ ಕೆಲಸವಾಗಿದೆ. ರಾಜ್ಯ ಮಟ್ಟದಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮೂಲಕ ಅಗತ್ಯ ಇರುವವರಿಗೆ ಕಾನೂನಿನ ನೆರವು ನೀಡುವುದು ಇದರ ಮುಖ್ಯ ಗುರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಸುರೇಶ ಪಾಟೀಲ್, ಹಿರಿಯ ವಕೀಲ ಬಿ.ಡಿ ಅನ್ಸೂರ, ಸವಿತಾ ಮಾಲಿ ಪಾಟಿಲ್, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಬಸವರಾಜ, ಹಿರಿಯ ವಕೀಲ ಬಸವರಾಜ ಕಿಲ್ಲೇದಾರ, ಸಹಾಯಕ ಸರಕಾರಿ ಅಭಿಯೋಜಕ ಮರೆಪ್ಪ ಹೊಸಮನಿ, ವಕೀಲರ ಸಂಘದ ಅಧ್ಯಕ್ಷ ರಮಾನಂದ ಕವಲಿ, ಸುಭಾಶ ಬಿರಾದಾರ, ಮಲ್ಲಿಕಾರ್ಜುನ ತಳ್ಳಳ್ಳಿ ಮತ್ತಿತರರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News